ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ವಿಧಿವಶ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಮಾಜಿ ಸಮಾಜವಾದಿ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್‌ ಅವರು ದೀರ್ಘಾಕಾಲದ ಅನಾರೋಗ್ಯದ ಕಾರಣದಿಂದ ಸಿಂಗಾಪುರ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಅನೇಕ ತಿಂಗಳುಗಳಿಂದ ಅವರು ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಮರ್ ಸಿಂಗ್ ಅವರು ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ಸಿಂಗಾಪುರಕ್ಕೆ ಚಿಕಿತ್ಸೆಗಾಗಿ ಹೋಗಿದ್ದ ಅಮರ್ ಸಿಂಗ್, ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. 2013ರಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು.

ಈ ಹಿಂದೆ ಮಾರ್ಚ್ ತಿಂಗಳಲ್ಲಿ ಅಮರ್ ಸಿಂಗ್ ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಆಗ, ಅದು ಸುಳ್ಳು, ಟೈಗರ್ ಜಿಂದಾ ಹೈ ಎಂದು ಖುದ್ದು ಅವರೇ ಸ್ಪಷ್ಟನೆ ನೀಡಿದ್ದರು.

ಅಮರ್ ಸಿಂಗ್ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಆಪ್ತರಾಗಿದ್ದರು. 2016 ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಇನ್ನು ಅಮರ್ ಸಿಂಗ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ‘ಅಮರ್ ಸಿಂಗ್ ಅವರು ಒಬ್ಬ ಸ್ನೇಹಜೀವಿ, ಈ ಸ್ನೇಹಿತನ ಅಗಲಿಕೆಯಿಂದ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ, ನಾವೆಲ್ಲ ಈದಿನ ಒಬ್ಬ ಉತ್ತಮ ನಾಯಕನನ್ನು ಕಳೆದುಕೊಂಡಿದ್ದೀವಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೀನಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

# ಬೆಳಿಗ್ಗೆ ಟ್ವೀಟ್ ಮಾಡಿದ್ದ ಅಮರ್ ಸಿಂಗ್
ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ ಪುಣ್ಯ ತಿಥಿ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಅಮರ್ ಸಿಂಗ್ ಟ್ವೀಟ್ ಮಾಡಿದ್ದರು. ಬಕ್ರೀದ್ ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದರು.

Facebook Comments

Sri Raghav

Admin