ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೆ 56 ವರ್ಷದ ವ್ಯಕ್ತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.8- ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಸಿಗದೆ ಮೃತಪಡುವವರ ಸಂಖ್ಯೆ ಮುಂದುವರೆದಿದೆ.ಇಂದು ಬೆಳಗ್ಗೆ ಸುಮಾರು 56 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಕುಟುಂಬದವರು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‍ಗಾಗಿ ಕಾಯುತ್ತಿದ್ದರು.  ಬೆಳಗ್ಗೆ 6 ಗಂಟೆಯಿಂದ ಐದಾರು ಗಂಟೆ ಕಾದರೂ ಆ್ಯಂಬುಲೆನ್ಸ್ ಆಗಲಿ ಬೇರೆ ಯಾವುದೇ ವಾಹನ ಸಿಗದೆ ಆ ವ್ಯಕ್ತಿ ಒದ್ದಾಡಿ ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.  ಬಿಬಿಎಂಪಿ ಹಾಗೂ ಪೊಲೀಸರಿಗೆ ಕರೆ ಮಾಡಿದರೂ ಯಾರೂ ನೆರವಾಗಲಿಲ್ಲ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments