ಟ್ರಕ್‍ಗೆ ಆಂಬ್ಯುಲೆನ್ಸ್ ಡಿಕ್ಕಿ : ಒಂದೇ ಕುಟುಂಬದ ನಾಲ್ವರ ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಬಿಹಾರ್ ಶರೀಫ್, ಸೆ.7-ನಿಂತಿದ್ದಟ್ರಕ್‍ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇತರ ಮೂವರು ತೀವ್ರಗಾಯಗೊಂಡಿರುವ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ಒಂದು ಮುಂಜಾನೆ ಸಂಭವಿಸಿದೆ.  ನಳಂದ ಜಿಲ್ಲೆಯ ಬಿಹಾರ್ ಶರೀಫ್‍ನ ಚಂಡೀ ಪೊಲೀಸ್‍ ಠಾಣೆ ವ್ಯಾಪ್ತಿಯ ಗೌರಾಪುರ್‍ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಬ್ಯುಲೆನ್ಸ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಟ್ರಕ್‍ಗೆ ಅಪ್ಪಳಿಸಿತು. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟರು, ಇತರ ಮೂವರು ತೀವ್ರ ಗಾಯಗೊಂಡಿದ್ದಾರೆ ಎಂದು ಠಾಣಾಧಿಕಾರಿ ಪಂಕಜ್‍ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಶೋಚನೀಯವಾಗಿದೆ. ಆಂಬ್ಯುಲೆನ್ಸ್‍ನಲ್ಲಿಇದ್ದವರಲ್ಲರೂ ಬಿಹಾರ್ ಶರೀಫ್ ಪೊಲೀಸ್‍ ಠಾಣೆ ವ್ಯಾಪ್ತಿಯ ಚೈನ್‍ಪುರ ಗ್ರಾಮದವರು.  ಅಪಘಾತದ ನಂತರ ಪರಾರಿಯಾಗಿರುವ ಆಂಬ್ಯುಲೆನ್ಸ್ ಚಾಲಕ ಪಾನಮತ್ತನಾಗಿದ್ದನು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

Facebook Comments