ಅಯೋಧ್ಯೆ ತೀರ್ಪು : ದೇಶದ ವಿವಿಧ ರಾಜ್ಯಗಳ ಪರಿಸ್ಥಿತಿ ಮಾಹಿತಿ ಪಡೆದ ಶಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.9-ಅಯೋಧ್ಯೆಯ ಚಾರಿತ್ರಿಕ ತೀರ್ಪು ಪ್ರಕಟವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿದರು. ತೀರ್ಪು ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಪರಿಸ್ಥಿತಿ ಹಾಗೂ ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.

ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿದ ಅಮಿತ್ ಷಾ, ಈಗಷ್ಟೇ ಅಯೋಧ್ಯೆ ತೀರ್ಪು ಬಂದಿದೆ. ನಿಮ್ಮ ರಾಜ್ಯಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕೆಂದು ಅವರು ಸೂಚನೆ ನೀಡಿದರು.

ಆಯಾ ರಾಜ್ಯಗಳ ಪೊಲೀಸ್ ಮುಖ್ಯಸ್ಥರು ಹಾಗೂ ಸಾಮಾಜಿಕ ರಕ್ಷಣೆಯ ನೇತೃತ್ವ ವಹಿಸಿರುವ ಉನ್ನತಾಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡುವಂತೆ ಅಮಿತ್‍ಷಾ ಮುಖ್ಯಮಂತ್ರಿಯವರಿಗೆ ನಿರ್ದೇಶನ ನೀಡಿದರು.

ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದವೋಲ್, ಕೇಂದ್ರ ಗೃಹ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಅಜಿತ್ ಭಲ್ಲಾ ಹಾಗೂ ಗುಪ್ತಚರದಳದ ನಿರ್ದೇಶಕ ಅರವಿಂದ್‍ಕುಮಾರ್ ಹಾಗೂ ಉನ್ನತಾಧಿಕಾರಿಗಳು ಸಹ ಸಭೆಯಲ್ಲಿ ಭಾಗವಹಿಸಿದ್ದರು.

Facebook Comments