ಭಾರತದ ಒಂದಂಗುಲ ಭೂಮಿಯನ್ನೂ ಸಹ ಕಸಿಯಲು ಸಾಧ್ಯವಿಲ್ಲ : ಶಾ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.18- ಭಾರತದ ಒಂದಂಗುಲ ಭೂಮಿಯನ್ನೂ ಸಹ ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಚೀನಾಗೆ ಎಚ್ಚರಿಕೆ ನೀಡಿದ್ದಾರೆ. ಪೂರ್ವ ಲಡಾಕ್‍ನ ಇಂಡೋ-ಚೀನಾ ಗಡಿ ಭಾಗದಲ್ಲಿ ಕಳೆದ ಐದು ತಿಂಗಳುಗಳಿಂದ ಮುಂದುವರೆದಿರುವ ಸಂಘರ್ಷ ಕುರಿತು ಪ್ರಸ್ತಾಪಿಸಿರುವ ಅವರು, ಭಾರತದ ನೆಲವನ್ನು ರಕ್ಷಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಪೂರ್ವ ಲಡಾಕ್ ಭಾಗದಲ್ಲಿ ಉದ್ಭವಿಸಿರುವ ಗಡಿ ಬಿಕ್ಕಟ್ಟು ನಿವಾರಣೆಗಾಗಿ ಚೀನಾದೊಂದಿಗೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳು ಮುಂದುವರೆದಿದ್ದರೂ ಸಹ ನಾವು ನಮ್ಮ ನೆಲದ ಮೇಲೆ ಅತ್ಯಂತ ಎಚ್ಚರಿಕೆಯಿಂದ ನಿಗಾ ಇಟ್ಟಿದ್ದೇವೆ. ನಮ್ಮ ಗಡಿ ಪ್ರದೇಶವನ್ನು ರಕ್ಷಿಸಿಕೊಳ್ಳಲು ನಾವು ಸಮರ್ಥರಿದ್ದೇವೆ ಎಂದು ತಿಳಿಸಿದ್ದಾರೆ. ಗಡಿ ಭಾಗದಲ್ಲಿ ಉದ್ಭವಿಸಬಹುದಾದ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಮ್ಮ ಸಶಸ್ತ್ರ ಪಡೆಗಳು ಸನ್ನದ್ಧವಾಗಿವೆ ಎಂದವರು ಹೇಳಿದ್ದಾರೆ.

Facebook Comments