ಚಿಕಿತ್ಸೆ ಪಡೆಯುತ್ತಿರುವ ಪೊಲೀಸರನ್ನು ಭೇಟಿ ಮಾಡಿದ ಅಮಿತ್ ಶಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜ.28: ಗಣರಾಜ್ಯೋತ್ಸವ ದಿನದಂದು ರೈತ ಸಂಘಟನೆಗಳು ನಡೆಸಿದ ಕಿಸಾನ್ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಪ್ರತಿಭಟನಾಕಾರರಿಂದ ಥಳಿತಕ್ಕೊಳಗಾಗಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿರುವ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಲು ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.

ಮಂಗಳವಾರ ನಡೆದ ಹಿಂಸಾಚಾರದಲ್ಲಿ ಕನಿಷ್ಠ 394 ಮಂದಿ ಪೊಲೀಸರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಾ ಅವರು ಗುರುವಾರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಶುಶ್ರುತ್ ಟ್ರಾಮಾ ಸೆಂಟರ್ ಮತ್ತು ತೀರ್ಥ ರಾಮ್ ಆಸ್ಪತ್ರೆಗೆ ಭೇಟಿ ನೀಡಿ ಪೋಲೀಸರ ಅರೋಗ್ಯ ವಿಚರಿಸಿದರು.

ಹಿಂಸಾಚಾರ ಸಂಬಂಧ ನಿನ್ನೆಯಷ್ಟೇ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಬೆಯಲ್ಲಿ ಎಫ್‌ಐಆರ್ ನಲ್ಲಿ ಹೆಸರು ದಾಖಲಾದ ಸುಮಾರು 25 ರೈತ ಮುಖಂಡರಿಗೆ ಲುಕ್ ಔಟ್ ನೋಟಿಸ್ ನೀಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಸಾಮಾನ್ಯಾಗಿ ಆರೋಪಿಗಳು ದೇಶದಿಂದ ಹೊರ ಹೋಗದಂತೆ ತಡೆಯುವ ಸಲುವಾಗಿ ವಲಸೆ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಬಳಕೆ ಮಾಡುತ್ತಾರೆ. ಅಂತರಾಷ್ಟ್ರೀಯ ಗಡಿ ಪ್ರದೇಶ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಕಡಲ ತೀರ ಪ್ರದೇಶಗಳು ಮತ್ತು ಬಂದರು ಪ್ರದೇಶಗಳಲ್ಲಿ ಕ್ರಿಮಿನಲ್ ಬಳನ್ನು ಬಂಧಿಸಲು ಈ ನೋಟಿಸ್’ನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ.

Facebook Comments