ಮೇ 25ರೊಳಗೆ ದೆಹಲಿಗೆ ಬರಲು ರಾಜ್ಯ ಬಿಜೆಪಿ ಶಾಸಕರಿಗೆ ಶಾ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23- ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭದಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದ ಬಿಜೆಪಿ ಶಾಸಕರಿಗೆ ಮೇ 25ರೊಳಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಬಿಜೆಪಿ ಶಾಸಕರನ್ನು ಅಮಿತ್ ಶಾ ರಾಜಧಾನಿಗೆ ಆಹ್ವಾನಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಚುನಾವಣಾ ಫಲಿತಾಂಶವೂ ರಾಜ್ಯ ರಾಜಕಾರಣದ ಮೇಲೂ ಪ್ರಭಾವ ಬೀರುವ ದಟ್ಟ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಆಸಕ್ತಿ ಮೂಡಿಸಿದೆ.

ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿವುದರಿಂದ ಅಮಿತೋತ್ಸಾಹದಲ್ಲಿರುವ ಅಮಿತ್ ಶಾ ಪಕ್ಷದ ಶಾಸಕರನ್ನು ದೆಹಲಿಗೆ ಆಹ್ವಾನಿಸಿ ಮುಂದಿನ ಕಾರ್ಯತಂತ್ರದ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ ಅಧಿಕೃತ ಫಲಿತಾಂಶ ಪ್ರಕಟವಾದ ನಂತರ ರಾಜ್ಯದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ ಆಗುವ ಬೆಳವಣಿಗಳನ್ನು ಗಮನಿಸಿ ಮುಂದಿನ ಹೆಜ್ಜೆ ಇಡಲು ಅಮಿತ್ ಶಾ ಹೊಸ ಕಾರ್ಯತಂತ್ರ ರೂಪಿಸಿದ್ದಾರೆ.

ಈ ಸಂಬಂಧ ಈಗಾಗಲೇ ರಾಜ್ಯದ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿರುವ ಅಮಿತ್ ಶಾ ದೆಹಲಿಗೆ ಆಗಮಿಸುವ ಬಿಜೆಪಿ ಶಾಸಕರು ಮತ್ತು ಹಿರಿಯ ನಾಯಕರ ಮುಂದಿನ ನಡೆ ಬಗ್ಗೆ ಚರ್ಚಿಸಲಿದ್ದಾರೆ.  ಹೀಗಾಗಿ ಮೇ 25ರ ಶನಿವಾರ ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. [ LOKSABHA ELECTIONS 2019 RESULT – Live Updates]

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin