ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಷಾ ಶ್ರದ್ದಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಅ.26- ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ 40 ಸಿಆರ್‍ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಷಾ ಅವರು, ಕಳೆದ ವರ್ಷ ಜೈಷ್-ಇ-ಮೊಹಮ್ಮದ್ ಸಂಘಟನೆಯ ದಾಳಿಗೆ ಬಲಿಯಾಗಿದ್ದವರ ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಅವರು ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟವರ ಸ್ಮಾರಕ ಪ್ರದೇಶಕ್ಕೆ ಭೇಟಿ ನೀಡಿ ಅವರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಟ್ವಿಟ್ ಮಾಡಿರುವ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿ ಮಡಿದ ವೀರ ಯೋಧರಿಂದ ನಮ್ಮ ದೇಶ ಇನ್ನು ಸುಭದ್ರವಾಗಿದೆ. ಅಂತಹ ಮಹಾನ್ ಯೋಧರಿಗೆ ನಾನು ಶಿರ ಭಾಗಿ ನಮಸ್ಕರಿಸುತ್ತೇನೆ ಎಂದು ನುಡಿದಿದ್ದಾರೆ.

Facebook Comments