ಸಾಧ್ವಿ ಪ್ರಗ್ಯಾ ಸ್ಪರ್ಧೆ ಸಮರ್ಥಿಸಿಕೊಂಡ ಅಮಿತ್ ಶಾ

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಕತಾ, ಏ.22- ಮಧ್ಯಪ್ರದೇಶದ ಭೋಪಾಲ್‍ನಿಂದ ಸ್ಪರ್ಧಿಸಲು ಸಾಧ್ವಿ ಪ್ರಗ್ಯಾ ಅವರಿಗೆ ಟಿಕೆಟ್ ನೀಡಿರುವ ಕ್ರಮವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇದು ಸರಿಯಾದ ಮತ್ತು ಸಮಂಜಸ ನಿರ್ಧಾರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಲ್ಕತಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್ ಶಾ, ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಅವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಒರೆಸಲಾಗಿದೆ. ನಿಜವಾದ ಅಪರಾಧಿ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾರೆ ಎಂದರು.

ಸಾಧ್ವಿ ಪ್ರಗ್ಯಾ ಅವರ ವಿರುದ್ಧ ಇತರ ಯಾವುದೇ ಗಂಭೀರ ಆರೋಪಗಳಿಲ್ಲ. ಅವರು ಈ ಹಿಂದೆ ನೀಡಿದ್ದ ಹೇಳಿಕೆಗೆ (ಹೇಮಂತ್ ಕರ್ಕರೆ ಸಾವಿಗೆ ನನ್ನ ಶಾಪವೇ ಕಾರಣ) ಈಗಾಗಲೇ ಅವರು ಕ್ಷಮೆ ಕೋರಿದ್ದಾರೆ. ಚುನಾವಣಾ ಆಯೋಗ ಕೂಡ ಅದನ್ನು ಮಾನ್ಯ ಮಾಡಿದೆ. ಹೀಗಾಗಿ ಅವರ ಸ್ಪರ್ಧೆಯನ್ನು ವಿರೋಧ ಪಕ್ಷಗಳು ಪ್ರಶ್ನಿಸುತ್ತಿರುವುದು ಸರಿಯಲ್ಲ ಎಂದರು.

ಸಾಧ್ವಿ ಪ್ರಗ್ಯಾ ಅಥವಾ ಸ್ವಾಮಿ ಅಸೀಮಾನಂದರ ವಿರುದ್ಧ ವ್ಯವಸ್ಥಿತಿ ಪಿತೂರಿಯಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗಿದೆ ಎಂದು ಅಮಿತ್ ಶಾ ಹೇಳಿದರು. ಸಾಧ್ವಿ ಅವರ ಸ್ಪರ್ಧೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆಯಷ್ಟೇ ಸಮರ್ಥಿಸಿಕೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ