ಅಮಿತಾಬ್ ಹಾಗೂ ಅಭಿಷೇಕ್ ಬಚ್ಚನ್‌ಗೆ ಕರೋನಾ ಪಾಸಿಟಿವ್..! ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಭಾರತೀಯ ಚಿತ್ರರಂಗದ ಖ್ಯಾತ ನಟ ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರು ಇಂದು ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈಗ ತಮ್ಮ ಟ್ವಿಟ್ಟರ್ ನ ಮೂಲಕ ಪಾಸಿಟಿವ್ ದೃಢ ಪಟ್ಟಿರುವುದನ್ನು ಅಮಿತಾಭ್​ ಟ್ವೀಟ್ ಮಾಡಿ ತಿಳಿಸಿದ್ದಾರೆ. ನನಗೆ ಕೊವಿಡ್​-19 ಸೋಂಕು ದೃಢಪಟ್ಟಿದು , ಆಸ್ಪತ್ರೆಗೆ ದಾಖಲಾಗಿದ್ದೇನೆ ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರು, ಸಿಬ್ಬಂದಿ ಎಲ್ಲರೂ ತಪಾಸಣೆಗೆ ಒಳಪಟ್ಟಿದ್ದಾರೆ ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಹಾಗೆಯೇ ನನ್ನನ್ನು ಕಳೆದ 10 ದಿನಗಳಲ್ಲಿ ಯಾರು ಭೇಟಿಯಾಗಿದ್ದರೋ ಅವರೆಲ್ಲಾ ಪ್ರಾಥಮಿಕ ಸಂಪರ್ಕಕ್ಕೆ ಬಂದು ದಯವಿಟ್ಟು ಕೊವಿಡ್​-19 ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಈ ಒಂದು ಸುದ್ದಿ ಇಡೀ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ.

# ಅಭಿಷೇಕ್ ಗೂ ಪಾಸಿಟಿವ್ :
ಹಿರಿಯ ನಟ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟ ನಂತರ ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ನನಗೆ ಮತ್ತು ನನ್ನ ತಂದೆಗೆ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ. ಇಬ್ಬರಲ್ಲಿಯೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ.

ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿಯ ಪರೀಕ್ಷೆಗೆ ಕ್ರಮಕೈಗೊಳ್ಳಲಾಗಿದೆ. ಯಾರು ಗಾಬರಿಯಾಗುವುದು ಬೇಡ. ಶಾಂತವಾಗಿರಿ ಎಂದು ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.

Facebook Comments

Sri Raghav

Admin