ಬ್ರೇಕಿಂಗ್ : ಗಾಂಧಿನಗರದಲ್ಲಿ ಅಮಿತ್ ಶಾ ಭರ್ಜರಿ ಜಯಭೇರಿ..!

ಈ ಸುದ್ದಿಯನ್ನು ಶೇರ್ ಮಾಡಿ

ಗಾಂಧಿನಗರ, ಮೇ 23- ಗುಜರಾತ್‍ನ ಪ್ರತಿಷ್ಠಿತ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಸರಿ ಪಕ್ಷದ ಚಾಣಾಕ್ಷ ಅಮಿತ್ ಶಾ ಭರ್ಜರಿ ಜಯ ದಾಖಲಿಸಿದ್ದಾರೆ.

ಮತ ಎಣಿಕೆ ಆರಂಭದಿಂದಲೂ ಕಾಂಗ್ರೆಸ್ ಅಧ್ಯರ್ಥಿ ಸಿ.ಜೆ.ಚಾವ್ದಾ ಅವರಿಗಿಂತಲೂ 25,000 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದ ಅಮಿತ್ ಶಾ ಗಾಂಧಿನಗರದಲ್ಲಿ ನಿರೀಕ್ಷೆಯಂತೆ ವಿಜಯಿಯಾಗಿದ್ದಾರೆ.

ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‍ನಲ್ಲಿ ವ್ಯಾಪಕ ಚುನಾವಣಾ ಪ್ರಚಾರ ನಡೆಸಿದ್ದ ಶಾ ಲೋಕಸಭೆಗೆ ಚುನಾಯಿತರಾದರು.

ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬರುವ ಹೊಸ ಎನ್‍ಡಿಎ ನೇತೃತ್ವದ ಹೊಸ ಸರ್ಕಾರದಲ್ಲಿ ಅಮಿತ್ ಶಾ ಸಚಿವ ಸ್ಥಾನದ ಜೊತೆ ಬಿಜೆಪಿ ಪಕ್ಷದ ಸಾರಥ್ಯವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. [ LOKSABHA ELECTIONS 2019 RESULT – Live Updates]

ಅಮಿತ್ ಶಾ ವಿರುದ್ಧ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಲು ತೀವ್ರ ಕಸರತ್ತು ನಡೆಸಿದ್ದ ಕಾಂಗ್ರೆಸ್ ಗಾಂಧಿನಗರ ಶಾಸಕ ಚಾವ್ದಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಚಾಬ್ದಾ ಗೆಲುವಿಗಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗಾಂಧಿನಗರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin