ಚುನಾವಣಾ ಆಯೋಗವನ್ನು ವಿಸರ್ಜಿಸಿ : ಆನಂದ್‍ಶರ್ಮಾ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ 3-ದೇಶದ ಮತದಾರರ ವಿಶ್ವಾಸ ಕಳೆದುಕೊಂಡಿರುವ ಭಾರತೀಯ ಚುನಾವಣಾ ಅಯೋಗವನ್ನು ವಿಸರ್ಜಿಸಬೇಕು ಹಾಗೂ ಆಯೋಗದ ಸದಸ್ಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾಧಿಕಾರಿಗಳ ನೇಮಕದ ಮಾನದಂಡಗಳನ್ನು ಸರ್ವೋಚ್ಚ ನ್ಯಾಯಾಲಯದ ಸಾಂವಿಧಾನಿಕ ಪೀಠ ನಿರ್ಧರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತಿಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಆಯೋಗ ನಡೆದುಕೊಂಡ ರೀತಿ ಹಾಗೂ ಚುನಾವಣೆ ನಡೆಸಿದ ರೀತಿಯಿಂದ ಅದರ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

Facebook Comments

Sri Raghav

Admin