ಅಂಗನವಾಡಿ ಖಾಲಿ ಹುದ್ದೆಗಳಿಗೆ  ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಗ್ರಾ.ಜಿಲ್ಲೆ, ಡಿ.24- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಂದು ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಹುದ್ದೆ, ಒಂದು ಮಿನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಮತ್ತು 9 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‍ಸೈಟ್ಮೂwww.anganwadirecruit.kar.nic.in  ಲಕ ಅರ್ಜಿ ಸಲ್ಲಿಸಲು 2020 ರ ಜನವರಿ 18 ಕೊನೆಯ ದಿನವಾಗಿದೆ. ಖಾಲಿ ಹುದ್ದೆಗಳ ಹಾಗೂ ಮೀಸಲಾತಿ ವಿವರಗಳಿಗಾಗಿ ವೆಬ್‍ಸೈಟ್ www.anganwadirecruit.kar.nic.in  ಅನ್ನು ಮತ್ತು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಟಿ.ಎ.ಪಿ.ಸಿ.ಎಂ.ಎಸ್ ಆವರಣ, ಹೊಸಕೋಟೆ ದೂ.ಸಂ.: 080-27931493 ಅನ್ನು ಸಂಪರ್ಕಿಸಬಹುದು ಎಂದು ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments