ಕೊರೊನಾ ಸೋಂಕು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮ : ಬಿಬಿಎಂಪಿ ಆಯುಕ್ತ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.30- ಕೊರೊನಾ ಸೋಂಕು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಾಲಿಕೆ ಸಭೆಯಲ್ಲಿಂದು ಕೊರೋನಾ ತಡೆಗಟ್ಟಲು ಬಿಬಿಎಂಪಿ ವಿಫಲವಾಗಿದೆ ಎಂಬ ಪ್ರತಿಪಕ್ಷ ಸದಸ್ಯರ ಆರೋಪಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಬಿಬಿಎಂಪಿಗೆ 45 ಕೋಟಿ ರೂ. ಬಿಡುಗಡೆ ಮಾಡಿದೆ. ಈ ಹಣವನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ, ಇತರ ಜಿಲ್ಲೆಗಳಿಗೆ ಹೋಲಿಸಿ ಕೊಂಡರೆ ಉತ್ತಮವಾಗಿದೆ. ಅತಿ ಕಡಿಮೆ ಸೋಂಕು ಕಂಡುಬರುತ್ತಿದೆ. ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ 14 ದಿನಗಳಲ್ಲೇ ಗುಣಮುಖರಾಗುತ್ತಿರುವುದು ಕಂಡುಬರುತ್ತಿದೆ. ನಗರದಲ್ಲಿ ಅಂಬ್ಯುಲೆನ್ಸ್ ಸಮಸ್ಯೆ ಇಲ್ಲ. ಕೋರ್ ಏರಿಯಾಗಳಲ್ಲಿ 10 ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ.

100 ಬೆಡ್‍ಗಳಿಗಿಂತ ಹೆಚ್ಚಿ ರುವ ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಿಕೊಳ್ಳ ಲಾಗಿದೆ. ಹಲವು ಕ್ರೀಡಾಂಗಣ, ಕಲ್ಯಾಣ ಮಂಟಪ, ಹಾಸ್ಟೆಲ್, ಹೊಟೇಲ್‍ಗಳಲ್ಲಿ ಸೋಂಕಿತರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 22 ಕೋವಿಡ್ ಸೆಂಟರ್‍ಗಳಿದ್ದು, 16 ಸಾವಿರ ಬೆಡ್ ವ್ಯವಸ್ಥೆ ಇದೆ. ಇಸ್ಕಾನ್ ಸಂಸ್ಥೆಯಿಂದ ಸೋಂಕಿತರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ.

ಕೆಲವು ಕಡೆ ಬೆಡ್‍ಗಳ ಸಮಸ್ಯೆಯಿದ್ದು ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತ ಅನಿಲ್‍ಕುಮಾರ್ ತಿಳಿಸಿದರು.

Facebook Comments