ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ,ಆ.2- ಉಪ ಚುನಾವಣೆಯಲ್ಲಿ ತಮ್ಮ ಪುತ್ರ ನಿಖಿಲ್ ಸ್ಪರ್ಧಿಸುವುದಿಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ನಗರದ ಕಾಳಿಕಾಂಭ ದೇವಾಲಯದಲ್ಲಿ ಇಂದು ಪೂಜೆ ಸಲ್ಲಿಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು,

ನಿಖಿಲ್ ಹೊಸ ಪ್ರೊಡಕ್ಷನ್‍ನ ಚಲನಚಿತ್ರದಲ್ಲಿ ನಟಿಸಲು ಸಹಿ ಮಾಡಿದ್ದಾರೆ. ಹಾಗಾಗಿ ಅವರು ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಿಖಿಲ್ ಕುಮಾರಸ್ವಾಮಿ ಕೆ.ಆರ್.ಪೇಟೆಯಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿದೆಯಲ್ಲ ಎಂಬ ವರದಿಗಾರರ ಪ್ರಶ್ನೆಗೆ ಅವರು ಈ ರೀತಿ ಸ್ಪಷ್ಟನೆ ನೀಡಿದರು.
ಬಿಜೆಪಿ ಸರ್ಕಾರದ ಅವಧಿ ಯಲ್ಲಿ ಅಭಿವೃದ್ಧಿಗೆ ತೊಂದರೆಯಾಗು ವುದಿಲ್ಲ ಎಂಬ ವಿಶ್ವಾಸವಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಯಾರಿಗೂ ತೊಂದರೆ ಮಾಡಿಲ್ಲ. ಹಾಗೆಯೇ ಬಿಜೆಪಿಯವರು ಕೂಡ ಅಭಿವೃದ್ಧಿಗೆ ಸಹಕರಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ರಾಜೀವ್‍ಗಾಂಧಿ ವಿಶ್ವವಿದ್ಯಾನಿಲಯ ಶೀಘ್ರವೇ ಪ್ರಾರಂಭವಾಗಲಿದೆ. ರೈತರು ಜಮೀನು ಕೊಡಲು ಒಪ್ಪಿದ್ದಾರೆ ಎಂದು ಹೇಳಿದ ಅವರು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮುಂದೆ ನೀವೇ ಕಾದು ನೋಡಿ ಎಂದು ತಿಳಿಸಿದರು.

Facebook Comments