ಪಕ್ಷ ಸೇರಿದ ಬೆನ್ನಲ್ಲೇ ಅಣ್ಣಾಮಲೈಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಆ. 30- ಇತ್ತೀಚೆಗೆ ಬಿಜೆಪಿ ಪಕ್ಷವನ್ನು ಸೇರ್ಪಡೆ ಗೊಂಡಿರುವ ಮಾಜಿ ಐಪಿಎಸ್ ಅಕಾರಿ ಕೆ.ಅಣ್ಣಾಮಲೈಗೆ ಹೊಸ ಜವಾಬ್ದಾರಿಯನ್ನು ನೀಡಲಾಗಿದೆ.

ರಾಜ್ಯ ಘಟಕದ ಅಧ್ಯಕ್ಷ ಎಲ್.ಮುರುಗನ್ ಸುದ್ದಿಗಾರರೊಂದಿಗೆ ಮಾತನಾಡಿ, ತಮಿಳುನಾಡಿನಲ್ಲಿ ಪಕ್ಷವನ್ನು ಮುಂದಿನ ಚುನಾವಣೆ ವೇಳೆಗೆ ಬಲಿಷ್ಠಗೊಳಿಸುವ ಉದ್ದೇಶದಿಂದಾಗಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆ ಆಗಿರುವ ಮಾಜಿ ಐಪಿಎಸ್ ಅಕಾರಿ ಅಣ್ಣಾಮಲೈಗೆ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಅವರ ರಾಜಕೀಯ ಜೀವನ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

ಐಪಿಎಸ್ ಅಕಾರಿಯಾಗಿದ್ದ ಅಣ್ಣಾಮಲೈ ಅವರು ತಮ್ಮ ಖಡಕ್ ನಿರ್ಧಾರಗಳಿಂದಾಗಿ ಕರ್ನಾಟಕದ ಅಪರಾಧ ಲೋಕಕ್ಕೆ ಕಡಿವಾಣ ಹಾಕುವ ಮೂಲಕ ಸಿಂಗಂ ಎಂದೇ ಪ್ರಖ್ಯಾತರಾಗಿದ್ದರು, 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತವರಿಗೆ ತೆರಳಿ ಕೃಷಿಯಲ್ಲಿ ತೊಡಗಿಕೊಂಡಿದ್ದರು.

ಬಿಜೆಪಿಯ ತತ್ವ ಆದರ್ಶಗಳನ್ನು ಮೆಚ್ಚಿ ಆಗಸ್ಟ್ 25 ರಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳೀಧರರಾವ್ ಹಾಗೂ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಮುರುಗನ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಣ್ಣಾಮಲೈಗೆ ಈಗ ಬಿಜೆಪಿ ಘಟಕದ ಉಪಾಧ್ಯಕ್ಷರ ಹುದ್ದೆಯನ್ನು ನೀಡಲಾಗಿದೆ.

Facebook Comments

Sri Raghav

Admin