ಹತ್ರಾಸ್ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಪ್ರಾಪ್ತೆ ಅಪಹರಿಸಿ ಗ್ಯಾಂಗ್ ರೇಪ್..!

ಈ ಸುದ್ದಿಯನ್ನು ಶೇರ್ ಮಾಡಿ

ಖಾರ್‍ಗೊನೆ (ಮ.ಪ್ರ.), ಅ.1- ಉತ್ತರಪ್ರದೇಶದ ಹತ್ರಾಸ್ ಮತ್ತು ಬಲರಾಮ್‍ಪುರ ಗ್ರಾಮಗಳಲ್ಲಿ ದಲಿತ ಯುವತಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿರುವಾಗಲೇ ಮಧ್ಯಪ್ರದೇಶದಲ್ಲಿ ಅಪ್ರಾಪ್ತೆಯೊಬ್ಬಳನ್ನು ಕಾಮುಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ನೀಚ ಕೃತ್ಯ ನಡೆದಿದೆ.

ಮಧ್ಯಪ್ರದೇಶದ ಖಾರ್‍ಗೊನೆಯಲ್ಲಿನ ಮರುಗಢ ಪ್ರದೇಶದ ಮನೆಯೊಂದಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಮೂವರು ಕಾಮುಕರು ಬಾಲಕಿಯನ್ನು ಅಪಹರಿಸಿ ಗ್ರಾಮದ ಹೊರವಲಯದ ಹೊಲದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾದರು ಎಂದು ಪೆÇಲೀಸರು ತಿಳಿಸಿದ್ದಾರೆ.

ನೀರು ಕೇಳುವ ನೆಪದಲ್ಲಿ ಮನೆಗೆ ಬಂದ ಮೂವರು ನನ್ನ ಮೇಲೆ ಹಲ್ಲೆ ನಡೆಸಿ ನನ್ನ ಸಹೋದರಿಯನ್ನು ಅಪಹರಿಸಿದರು ಎಂದು ಸಂತ್ರಸ್ತೆಯ ಅಣ್ಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್ ವರಿಷ್ಠಾಕಾರಿ ಶೈಲೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Facebook Comments

Sri Raghav

Admin