ರಾಮನಗರದಲ್ಲಿ 46 ಬಾಲಕಾರ್ಮಿಕರ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಜೂ.12-ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಇಲ್ಲಿಯವರೆಗೂ ಒಟ್ಟು 270ಕ್ಕೂ ಹೆಚ್ಚು ಅನಿರೀಕ್ಷಿತ ದಾಳಿಗಳನ್ನು ಕೈಗೊಂಡು 46 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಶೇಖರ್ ಎಸ್ ಗಢದ್‌ ತಿಳಿಸಿದ್ದಾರೆ
ತಪ್ಪಿತಸ್ಥ 46 ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರುಗಳ ವಿರುದ್ಧ ಸ್ಥಳಿಯ ಪೋಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ಅವರು ಪತ್ರಿಕಾ ಪ್ರಕಣೆಯಲ್ಲಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪುನರ್‌ವಸತಿಗಾಗಿ ಜಿಲ್ಲಾಧಿಕಾರಿಗಳವರ ಹೆಸರಿನಲ್ಲಿ ಕಾರ್ಪೋಸ್ ಫಂಡ್ ಎಂಬ ಖಾತೆಗೆ ಇಲ್ಲಿಯವರೆಗೂ ಹತ್ತು ಪ್ರಕರಣಗಳಲ್ಲಿ ತಲಾ 20000 ರೂ.ಗಳಂತೆ ಒಟ್ಟು ಎರಡು ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿ ಜಮೆ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಯಾದ್ಯಂತ ಬಾಲಕಾರ್ಮಿಕ ನಿಷೇಧ ಕುರಿತಾಗಿ 340 ಗೋಡೆ ಬರಹಗಳನ್ನು ಹಾಗೂ 73 ಬೀದಿ ನಾಟಕಗಳನ್ನು ಹಾಗೂ 8 ಆಟೋ ಪ್ರಚಾರಗಳನ್ನು ಆಯೋಜಿಸುವ ಮೂಲಕ ಪ್ರತಿ ವರ್ಷ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಸಾರ್ವಜನಿಕರಿಗೆ ಮತ್ತು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾನೂನಿನ ಪ್ರಕಾರ ಬಾಲ ಕಾರ್ಮಿಕರನ್ನು ನೇಮೆಸಿಕೊಂಡರೆ ದಂಡನಾರ್ಹ ಅಪರಾಧವಾಗಿರುತ್ತದೆ. ಯಾರು ಕೂಡ 14 ರಿಂದ 18 ವಯಸ್ಸಿನ ಬಾಲಕಾರ್ಮಿಕರನ್ನು ಮತ್ತು ಕಿಶೋರಾ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ಸೂಚಿಸಿದ್ದಾರೆ.

ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಟ ಪದ್ಧತಿ ವಿರುದ್ಧ ಹೋರಾಡಲು ಮತ್ತು ಈ ಬಗ್ಗೆ ಇರುವ ದೇಶದ ಕಾನೂನನ್ನು ಪಾಲಿಸುವುದು ಪ್ರತಿಯೊಬ್ಬರ ಜವ್ದಾರಿಯಾಗಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರು ಸಹಕರಿಸಿ ಎಂದು ಅವರು ಮನವಿ ಮಾಡಿದ್ದಾರೆ. ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಪ್ರಕಾರ ಜಾಗತಿಕವಾಗಿ ವಿಶ್ವದಲ್ಲಿ ಸುಮಾರು 152 ಮಿಲಿಯನ್ ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರಲ್ಲಿ 72ಮಿಲಿಯನ್ ಮಕ್ಕಳು ಅಪಾಯಕಾರಿ ಕೆಲಸದಲ್ಲಿದ್ದಾರೆ.

ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿಲ್ಪಟ್ಟಿದೆ.
15 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಲ್ಳುವುದು ಶಿಕ್ಷಾರ್ಹ ಅಪಾರಾಧವಾಗಿದೆ ಎಂದು ಅವರು ಹೇಳಿದ್ದಾರೆ.

Facebook Comments