“ಚಾರ್ಜ್‍ಶೀಟ್‍ನಲ್ಲಿ ಅನುಶ್ರೀ ಹೆಸರು ಕೈಬಿಟ್ಟ ಬಗ್ಗೆ ನನಗೇನೂ ಗೊತ್ತಿಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಸೆ.8- ಸ್ಯಾಂಡಲ್‍ವುಡ್ ಡ್ರಗ್ಸ್ ಸೇವನೆ ಪ್ರಕರಣದ ಚಾರ್ಜ್‍ಶೀಟ್‍ನಲ್ಲಿ ನಿರೂಪಕಿ ಅನುಶ್ರೀ ಅವರ ಹೆಸರನ್ನು ಕೈ ಬಿಟ್ಟಿರುವ ವಿಚಾರ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದ ಚಾರ್ಜ್‍ಶೀಟ್‍ನಲ್ಲಿ ಆರೋಪಿಗಳನ್ನು ಕೈ ಬಿಡುವಂತೆ ಯಾವ ರಾಜಕೀಯ ನಾಯಕರು ನಮ್ಮ ಮೇಲೆ ಒತ್ತಡ ಹಾಕಿಲ್ಲ ಎಂದು ಹೇಳಿದ್ದಾರೆ.

ಮಾದಕ ವಸ್ತುಗಳ ಪ್ರಕರಣದಲ್ಲಿ ಕಾನೂನು ತನ್ನದೇ ದಾರಿ ಕಂಡುಕೊಳ್ಳಲಿದೆ. ಯಾರ ವಿಷಯದಲ್ಲೂ ಮೃದು ಧೋರಣೆ ಅನುಸರಿಸುತ್ತಿಲ್ಲ ಎಂದು ಗೃಹ ಸಚಿವರು ಸ್ಪಷ್ಟ ಪಡಿಸಿದ್ದಾರೆ.ಡ್ರಗ್ಸ್ ಪ್ರಕರಣದ ದೋಷಾರೋಪಣಾ ಪಟ್ಟಿಯಲ್ಲಿ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಹೆಸರು ಕೈಬಿಡಲಾಗಿದೆ ಎಂಬ ಆರೋಪ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಡ್ರಗ್ಸ್ ಸೇವನೆ ಕುರಿತಂತೆ ಖಚಿತ ಪಡಿಸಿಕೊಳ್ಳಲು ಕೂದಲನ್ನು ವಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ಸಂಪೂರ್ಣ ವರದಿ ಬಂದಿದೆ. ಮುಂದಿನ ಕ್ರಮಗಳ ಬಗ್ಗೆ ಕಾನೂನು ತನ್ನದೇ ಆದ ದಾರಿ ಕಂಡುಕೊಳ್ಳುತ್ತದೆ ಎಂದು ಗೃಹ ಸಚಿವರು ಹೇಳಿದರು.ಪೊಲೀಸರು ಯಾರ ವಿಷಯದಲ್ಲೂ ಮೃದು ಧೋರಣೆ ಅನುಸರಿಸುತ್ತಿಲ್ಲ. ಯಾರನ್ನು ಹಿಡಿಯುವ ಅಥವಾ ಬಿಟ್ಟು ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಜಾಲದ ಬಗ್ಗೆ ತನಿಖೆ ಕೈಗೊಂಡಾಗ ಆ್ಯಂಕರ್ ಅನುಶ್ರೀ ಅವರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಅನುಶ್ರೀಗೆ ನೋಟಿಸ್ ಕೊಟ್ಟು ಮಂಗಳೂರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡು ಕಳುಹಿಸಿದ್ದರು.

Facebook Comments

Sri Raghav

Admin