ಅಮರಾವತಿಯ ಇಂದ್ರನಾಗಲಿರುವ ಜಗನ್‍ಮೋಹನ್, ತಿಂಗಳಾಂತ್ಯದಲ್ಲಿ ಪಟ್ಟಾಭಿಷೇಕ

ಈ ಸುದ್ದಿಯನ್ನು ಶೇರ್ ಮಾಡಿ

ಅಮರಾವತಿ,ಮೇ 23- ಆಂಧ್ರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ವೈಎಸ್‍ಆರ್ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವುದರಿಂದ ಆ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ತಿಂಗಳಾಂತ್ಯದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

175 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು 88 ಶಾಸಕರ ಸರಳ ಬಹುಮತದ ಅಗತ್ಯವಿತ್ತು. ಆದರೆ ತೆಲುಗು ಮತಬಾಂಧವರು ವೈಎಸ್‍ಆರ್ ಕಾಂಗ್ರೆಸ್ ಪಕ್ಷವನ್ನು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. [ LOKSABHA ELECTIONS 2019 RESULT – Live Updates]

ಈ ಬಾರಿಯ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೀಗಾಗಿ ಮೇ 25ರಂದು ಜಗನ್ ಮೋಹನ್ ರೆಡ್ಡಿ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಅಂದೇ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸಲು ಆಹ್ವಾನಿಸುವಂತೆ ಜಗನ್ ಮೋಹನ್ ರೆಡ್ಡಿ ಮನವಿ ಮಾಡಿಕೊಳ್ಳಲಿದ್ದು, ತಿಂಗಳಾಂತ್ಯದಲ್ಲಿ ಜಗನ್ ಆಂಧ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತಪಟ್ಟಿದೆ. [ LOKSABHA ELECTIONS 2019 RESULT – Live Updates]

Facebook Comments

Sri Raghav

Admin