ಕನ್ನಡಾಭಿಮಾನ ಮೆರೆದ ಕನ್ನಡಪರ ಸಂಘಟನೆಗಳು

ಈ ಸುದ್ದಿಯನ್ನು ಶೇರ್ ಮಾಡಿ

ಅರಸೀಕೆರೆ, ನ.1- ಕೊರೊನಾಭೀತಿಯ ನಡುವೆಯೂ ತಾಲ್ಲೂಕು ಆಡಳಿತ ಸೇರಿದಂತೆ ಕನ್ನಡಪರ ಸಂಘಟನೆಗಳು ಅಲ್ಲಲ್ಲಿ ಕನ್ನಡ ರಾಜ್ಯೊೈತ್ಸವ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಕನ್ನಡಾಭಿಮಾನ ಮೆರೆದರು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಾದ ವೈದ್ಯರು, ಪತ್ರಕರ್ತರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಪಂ ವಾಟರ್ ಮನ್ ಗಳಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಅವರ ಸೇವಾ ಕಾರ್ಯವನ್ನು ಶ್ಲಾಘಿಸಿದ್ದು ರಾಜ್ಯೋತ್ಸವ ಕಾರ್ಯಕ್ರಮದ ವಿಶೇಷವಾಗಿತ್ತು.

ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಜಗತ್ತಿಗೆ ಸಾರಿದ ದೇಶ ನಮ್ಮದು ಅದರಲ್ಲೂ ವಿಶಿಷ್ಟ ಸಂಸ್ಕøತಿ ಶ್ರೀಮಂತವಾಗಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ನಾಡು ನುಡಿ ನೆಲ ಜಲಗಳ ಬಗ್ಗೆ ಚರ್ಚೆ ನಡೆಸುವ ಜತೆಗೆ ಈ ಎಲ್ಲ ವಿಷಯಗಳಿಂದ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ವೇದಿಕೆಯಾಗಬೇಕು ಎಂದು ಕರೆ ನೀಡಿದರು.

ಹೇರಳವಾಗಿ ಲಭ್ಯವಿರುವ ಜಲ ಸಂಪತ್ತನ್ನು ಸಮರ್ಪಕವಾಗಿ ನಾವು ಬಳಕೆ ಮಾಡಿಕೊಳ್ಳುವುದರಲ್ಲಿ ಎಡವಿರುವುದರಿಂದ ಅತಿವೃಷ್ಟಿ ಹೆಸರಿನಲ್ಲಿ ರಾಜ್ಯದಲ್ಲಿ ಅಲ್ಲೇಲ ಕ¯್ಲಲ್ಲೇಲ ಆಗಿಂದಾಗ್ಗೆ ಸಂಭವಿಸುತ್ತಲೇ ಇವೆ. ಇನ್ನಾದರೂ ಸರ್ಕಾರ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು ಮಳೆಗಾಲದಲ್ಲಿ ಅವಾಂತರ ಸೃಷ್ಟಿಸುವ ನದಿನೀರು ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಬಯಲು ಸೀಮೆಯ ಕೆರೆ ಕಟ್ಟೆಗಳನ್ನು ತುಂಬಿಸುವ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸುವಂತೆ ಮನವಿ ಮಾಡಿದರು.

ಸಮಾರಂಭದಲ್ಲಿ ನಗರ ಯೋಜನಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಡಿ.ಪ್ರಸಾದ್, ಡಿವೈಎಸ್‍ಪಿ ನಾಗೇಶ್, ತಾಪಂ ಕಾರ್ಯನಿರ್ವಣಾಧಿಕಾರಿ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್, ನಗರಸಭೆ ಪೌರಾಯುಕ್ತ ಕಾಂತರಾಜ್, ಕೊರೊನಾ ವಾರಿಯರ್ಸ್‍ಗಳಾದ ಡಾ.ಶಿವಕುಮಾರ್, ಡಾ.ಷಡಕ್ಷರಿ, ಡಾ.ನಾಗಭೂಷಣ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook Comments