ದ್ವಿಚಕ್ರ ವಾಹನ ಚೋರರ ಬಂಧನ : 2 ಬೈಕ್, 10 ಮೊಬೈಲ್‍ಗಳ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.2- ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿ 2 ಬೈಕ್ ಹಾಗೂ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಸೆ.18ರಂದು ರಾತ್ರಿ ಪಿರ್ಯಾದುದಾರರು ತಮ್ಮ ಹೋಂಡಾ ಶೈನ್ ಮೋಟಾರ್ ಬೈಕ್‍ಅನ್ನು ತಮ್ಮ ಮನೆ ಮುಂದೆ ನಿಲ್ಲಿಸಿದ್ದಾಗ ಬೆಳಗಾಗುವಷ್ಟರಲ್ಲಿ ಈ ವಾಹನ ಕಳ್ಳತನವಾಗಿತ್ತು.

ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‍ಪೆಕ್ಟರ್ ಸತೀಶ್‍ಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಸಿ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಗಳು ವಿಜಯನಗರ, ಜೆಜೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳವು ಮಾಡಿದ್ದ 2 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನ ಹಾಗೂ 10 ಮೊಬೈಲ್‍ಗಳನ್ನು ವಶಕ್ಕೆ ಪಡೆಯುವಲ್ಲಿ ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Facebook Comments