ವ್ಯಕ್ತಿ ಬಂಧನ : 1 ಕೆಜಿ 700 ಗ್ರಾಂ ಗಾಂಜಾ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.26- ಬಿಎಂಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು 1 ಕೆಜಿ 700 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸುಂಕದಕಟ್ಟೆ ನಿವಾಸಿ ರಘು (27) ಬಂಧಿತ ಆರೋಪಿ. ನಾಗರಬಾವಿ 2ನೆ ಹಂತದ ಬಿಎಂಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ.ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್‍ಪೆಕ್ಟರ್ ಶ್ರೀನಿವಾಸ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿ ರಘುವನ್ನು ಬಂಧಿಸಿದ್ದಾರೆ.

ಆರೋಪಿಯು ತೆಲಂಗಾಣದ ವಜ್ರಕಂಟೆಯಲ್ಲಿ ಅಪರಿಚಿತ ವ್ಯಕ್ತಿಯಿಂದ ಗಾಂಜಾವನ್ನು ಖರೀದಿಸಿ ತಂದು ಮಾರಾಟ ಮಾಡುತ್ತಿದುದಾಗಿ ವಿಚಾರಣೆ ವೇಳೆ ಗೊತ್ತಾಗಿದೆ.

Facebook Comments