ಮಾದಕವಸ್ತು ಮಾರಾಟ : ಸೂಡಾನ್ ಪ್ರಜೆ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.12-ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸೂಡಾನ್ ದೇಶದ ಪ್ರಜೆಯನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಮ್ಮನಹಳ್ಳಿಯ ಕಲ್ಯಾಣನಗರದಲ್ಲಿ ವಾಸವಾಗಿದ್ದ ಅಹಮ್ಮದ್ ಅಸನ್(31) ಬಂಧಿತ ಆರೋಪಿಯಾಗಿದ್ದು, ಈತನಿಂದ 13 ಗ್ರಾಂ ತೂಕದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಈತ ಮತ್ತಿಕೆರೆಯ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಈತನನ್ನು ಬಂಧಿಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ವಿದ್ಯಾಭ್ಯಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಈ ಹಿಂದೆ ಕೊತ್ತನೂರು ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಬಂದಿರುವುದಾಗಿ ತಿಳಿಸಿದ್ದಾನೆ.

Facebook Comments