ನಾಳೆ ಪೋಷಕ ಕಲಾವಿದರಿಗೆ ಕೊರೊನಾ ಲಸಿಕಾ ಅಭಿಯಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.17- ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ವತಿಯಿಂದ ನಾಳೆ ಕನ್ನಡ ಚಿತ್ರೋದ್ಯಮದ ಎಲ್ಲಾ ವಲಯದ ಸದಸ್ಯರು ಹಾಗೂ ಕುಟುಂಬದವರಿಗೆ ಉಚಿತ ಕೊರೊನಾ ಲಸಿಕೆ ಅಭಿಯಾನ ಆಯೋಜಿಸಲಾಗಿದೆ. ಗಾಂಧಿನಗರದ ಕರ್ನಾಟಕ ಚಲನಚಿತ್ರ ಕಲಾವಿದರ, ಕಾರ್ಮಿಕರ, ತಂತ್ರಜ್ಞರ ಒಕ್ಕೂಟದ ಕಾರ್ಯಾಲಯದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ನಟ ಶಿವರಾಜ್‍ಕಮಾರ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ನಟಿ ಪ್ರೇಮಾ, ಶಾಸಕ ದಿನೇಶ್ ಗುಂಡೂರಾವ್, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜಯರಾಜ್, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕನ್ನಡ ಚಲನಚಿತ್ರ ಕಲಾವಿದರ, ಕಾರ್ಮಿಕರ, ತಂತ್ರಜ್ಞರ ಒಕ್ಕೂಟದ ಅಧ್ಯಕ್ಷ ಸಾ.ರಾ. ಗೋವಿಂದು, ಬಿಬಿಎಂಪಿ ಮಲ್ಲೇಶ್ವರಂ ವಿಭಾಗದ ಮುಖ್ಯ ಆರೋಗ್ಯ ಅಧಿಕಾರಿ ಮನೋರಂಜನ್ ಹೆಗಡೆ ಇತರರು ಉಪಸ್ಥಿತರಿರುವರು.

Facebook Comments