ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ, ಶಮನವಾಗುತ್ತಾ ಅಸಮಾಧಾನ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.8- ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪತ್ರ ಬರೆದು ಸಚಿವ ಈಶ್ವರಪ್ಪ ಅಸಮಾಧಾನ ಹೊರ ಹಾಕಿದ ನಂತರ ಮೊದಲ ಬಾರಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಿರುವುದು ಭಾರೀ ಕುತೂಹಲ ಕೆರಳಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಅವರ ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅರುಣ್‍ಸಿಂಗ್ ಆಗಮಿಸುತ್ತಿದ್ದಾರೆ.

ಇದರ ನಡುವೆ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಯತ್ನಾಳ್ ಹೇಳಿಕೆಗಳು ಕಮಲ ಪಾಳಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿವೆ. ಅರುಣ್‍ಸಿಂಗ್ ಅವರನ್ನು ಭೇಟಿಯಾಗಲಿರುವ ಈಶ್ವರಪ್ಪ, ತಮ್ಮ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ದಾಖಲೆಗಳ ಪುರಾವೆ ನೀಡಲಿದ್ದಾರೆ ಎಂದು ಗೊತ್ತಾಗಿದೆ.

ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅರುಣ್ ಸಿಂಗ್ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.  ಕೇವಲ ಉಪ ಚುನಾವಣಾ ಪ್ರಚಾರಕ್ಕಾಗಿ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿಲ್ಲ. ಈಶ್ವರಪ್ಪ ಪತ್ರ ಸಂಬಂಧ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ರಾಜ್ಯ ನಾಯಕರು ನಿರೀಕ್ಷೆಯಲ್ಲಿದ್ದಾರೆ.

ಪತ್ರ ಸಂಬಂಧ ಈ ಹಿಂದೆಯೇ ಮಾತನಾಡಿದ್ದ ಅರುಣ್ ಸಿಂಗ್ ಉಪ ಚುನಾವಣೆ ನಂತರ ಇದರ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ಬೆಂಗಳೂರಿಗೆ ಆಗಮಿಸುವ ಅರುಣ್ ಸಿಂಗ್, ಮಧ್ಯಾಹ್ನ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಯೋಜಿಸಿರುವ ವೈಯಕ್ತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂದಿನ ಮೂರು ದಿನಗಳು ಅರುಣ್ ಸಿಂಗ್ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

Facebook Comments