ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾಳಿ ರಾಜೀನಾಮೆ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು : ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.
Facebook Comments