ಪಾಟೀಲ್ ನಡಹಳ್ಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ಮುದ್ದೇಬಿಹಾಳ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕ ನಡಹಳ್ಳಿ ಅವರು ಮುದ್ದೇಬಿಹಾಳ ಹಾಗೂ ದೇವರ ಹಿಪ್ಪರಗಿ ಕ್ಷೇತ್ರಗಳ ರೈತರ ಪರವಾಗಿ ನೀರಾವರಿ ಹೋರಾಟಗಳಲ್ಲಿ ಯಶಸ್ವಿಯಾಗಿದ್ದಾರೆ.

ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದಾರೆ. ಮೊದಲ ಕೊರೊನಾ ಅಲೆ ಮತ್ತು ಎರಡನೆ ಕೊರೊನಾ ಅಲೆ ಸಂದರ್ಭದಲ್ಲಿ ಸಂತ್ರಸ್ತರಾದ ಜನರ ನೆರವಿಗೆ ಧಾವಿಸಿ ಅವರ ಕಷ್ಟಗಳಿಗೆ ಮಿಡಿದಿದ್ದಾರೆ. ಕ್ಷೇತ್ರದಲ್ಲಿ ಅಪಾರ ಸಾವು-ನೋವುಗಳಾಗುವು ದನ್ನು ತಡೆದಿದ್ದಾರೆ.

ಮುದ್ದೇಬಿಹಾಳ ಕ್ಷೇತ್ರದ ಬಳಿ ಆಲಮಟ್ಟಿ-ನಾರಾಯಣಪುರ ಜಲಾಶಯಗಳಿದ್ದು, ನೀರಾವರಿ ಬಗ್ಗೆ ಶಾಸಕ ನಡಹಳ್ಳಿ ಅವರಿಗೆ ಸಾಕಷ್ಟು ಅನುಭವವಿದೆ. ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಖಾತೆ ಸಿಕ್ಕರೆ ಬರಗಾಲದ ಬೀಡು ಎಂದು ಹೆಸರು ವಾಸಿಯಾಗಿರುವ ವಿಜಯಪುರ ಜಿಲ್ಲೆ ಸಮಗ್ರ ನೀರಾವರಿ ಪ್ರದೇಶ ವಾಗುವುದರಲ್ಲಿ ಎರಡು ಮಾತಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.ಬರದ ಜಿಲ್ಲೆಯಾದ ವಿಜಯಪುರದ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕೆರೆಗಳನ್ನು ತುಂಬಿಸುವುದು, ರೈತರಿಗೆ ನೀರೊದಗಿಸುವುದರಲ್ಲಿ ಅಪಾರವಾಗಿ ಶ್ರಮಿಸಿ ಯಶಸ್ವಿಯಾಗಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿ ಸಾಕಷ್ಟು ಜನಸೇವಾ ಕಾರ್ಯಗಳನ್ನು ಮಾಡಿರುವ ಅವರಿಗೆ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುತ್ತಾರೆ ಮತ್ತು ವಿಜಯಪುರ ಜಿಲ್ಲೆಯ ಅಭಿವೃದ್ಧಿಗೂ ಅವಕಾಶವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಉತ್ತರ ಕರ್ನಾಟಕ ಭಾಗಗಳನ್ನು ಕಡೆಗಣಿಸಲಾಗುತ್ತದೆ ಎಂಬ ಅಪಖ್ಯಾತಿಗೆ ಅದರಲ್ಲೂ ವಿಜಯಪುರದಂತಹ ಬರದ ಜಿಲ್ಲೆಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಕ್ಕರೆ ಸಾಕಷ್ಟು ಅನುಕೂಲವಾಗುತ್ತದೆ. ಅಲ್ಲದೆ, ನೀರಾವರಿ ಬಗ್ಗೆ ,ಜನರ ಸೇವೆ ಮಾಡುವ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿರುವ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಸಂಪುಟದಲ್ಲಿ ಸ್ಥಾನಮಾನ ಸಿಕ್ಕರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಜಿಲ್ಲೆಯ ಹಿರಿಯ ಮುಖಂಡರ ಅಭಿಪ್ರಾಯವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾಗೂ ಪಕ್ಷದ ಹಿರಿಯ ವರಿಷ್ಠರು ಇವರ ಸೇವಾ ಸಾಮಥ್ರ್ಯ ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ.

Facebook Comments