ಮತ್ತೆ ಧರಣಿಗಿಳಿದ ಆಶಾ ಕಾರ್ಯಕರ್ತೆಯರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.9- ಆಶಾ ಕಾರ್ಯಕರ್ತೆಯರು ಮತ್ತೆ ಧರಣಿ ಪ್ರಾರಂಭಿಸುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ. ನಗರದ ಟೌನ್‍ಹಾಲ್ ಮುಂಭಾಗ ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆ ಯರ ಸಂಘದ ನೇತೃತ್ವದಲ್ಲಿ ಧರಣಿ ನಡೆಸಿದ ಆಶಾ ಕಾರ್ಯಕರ್ತೆಯರು 15 ತಿಂಗಳ ಎಂಸಿಟಿಸ್ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುದಡೆಗೊಳಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ನಮ್ಮನ್ನು ಕಾರ್ಮಿಕ ರೆಂದು ಪರಿಗಣಿಸಬೇಕು. ಇಲ್ಲದೆ ಹೋದರೆ ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಿದರು. ಕಳೆದ ವಾರ ಪ್ರತಿಭಟನೆ ನಡೆಸಿದ ವೇಳೆ ಆರೋಗ್ಯ ಸಚಿವ ಶ್ರೀರಾಮುಲು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಇತ್ತ ಸರ್ಕಾರ ಮುಷ್ಕರ ನಡೆಸಿದ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್ ನೀಡಿತ್ತು. ಇದೆಲ್ಲದರಿಂದ ರೊಚಿಗೆದ್ದು ಆಶಾ ಕಾರ್ಯಕರ್ತೆಯರು ಇಂದು ಮತ್ತೆ ಧರಣಿಗಿಳಿದಿದ್ದಾರೆ.

Facebook Comments