ತುರ್ತು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಸಚಿವ ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.20- ಜಿಲ್ಲಾಧಿಕಾರಿ ಸೇರಿದಂತೆ ಕಂದಾಯ ಇಲಾಖೆಯ ಎಲ್ಲ ಅಧಿಕಾರಿಗಳು ಗ್ರಾಮದಲ್ಲಿದ್ದು ತುರ್ತು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಬೆಂಗಳೂರು ಗ್ರಾಮದ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕು ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳಿಯ ಕೆಡ ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಗ್ರಾಮದೇವತೆ ಮಾರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ದಲಿತ ಕಾಲೋನಿಯ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.

ಪಹಣಿ ತಿದ್ದುಪಡಿ, ಖಾತೆ ಬದಲಾವಣೆ, ಹಿರಿಯ ನಾಗರಿಕರ ಮಾಸಾಶನ, ವಿಕಲಚೇತನ ಸೌಲಭ್ಯಗಳು ಸೇರಿದಂತೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ತುರ್ತು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು ಉಳಿದ ಸಮಸ್ಯೆಗಳನ್ನು ಆದ್ಯತೆ ಮೇಲೆ ಪರಿಹರಿಸಲಾಗುವುದು.

ಇದಕ್ಕಾಗಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಕಂದಾಯ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಪರಿಹಾರವನ್ನು ಒದಗಿಸುತ್ತಿದ್ದಾರೆ ಎಂದು ಹೇಳಿದರು. ಎಲ್ಲಾ ವರ್ಗದವರು ಸೇರಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಅಶೋಕ್ ತಿಳಿಸಿದರು.

ಇದಕ್ಕೂ ಮುನ್ನ ಸಚಿವರನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ವೆಂಕಟರಮಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್, ಎಸ್‍ಪಿ ರವಿ.ಡಿ ಚನ್ನಣ್ಣನವರ್, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Facebook Comments