ಸಚಿವ ಸಂಪುಟ ವಿಸ್ತರಣೆಯೇ ಹೊರತು ಪುನಾರಚನೆಯಲ್ಲ : ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.11- ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆಯೇ ಹೊರತು ಪುನಾರಚನೆಯಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಸಚಿವರ ಖಾತೆಗಳಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.

ಆದರೆ, ಹೆಚ್ಚುವರಿಯಾಗಿರುವ ಖಾತೆಗಳನ್ನು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಉಪ ಮುಖ್ಯಮಂತ್ರಿ ಹುದ್ದೆ ರದ್ದುಗೊಳಿಸುವ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಉಪ ಚುನಾವಣೆ ಸಂದರ್ಭದಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಭರವಸೆ ನೀಡಿದ್ದರೋ ಆ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ಹೇಳಿದರು.

ನೂತನ ಶಾಸಕರು ಯಾರೂ ಕೂಡ ಇಂತಹ ಖಾತೆಯೇ ಬೇಕೆಂದು ಬೇಡಿಕೆ ಇಟ್ಟಿಲ್ಲ . ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

Facebook Comments