ಗೆದ್ದವರಿಗೆ ಬಹುಮಾನವಿದೆ : ಡಿಸಿಎಂ ಅಶ್ವತ್ಥ ನಾರಾಯಣ್

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ, ಡಿ.10- ಉಪಚುನಾವಣೆಯಲ್ಲಿ ಗೆದ್ದವರಿಗೆ ಬಹುಮಾನವಿದೆ. ಸೋತವರ ಬಗ್ಗೆ ಏನು ಮಾಡಬೇಕೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಹೇಳಿದರು. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ.

ಅದೇ ರೀತಿ ಸೋತವರಿಗೆ ಏನು ಮಾಡಬೇಕೆಂಬುದನ್ನು ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಚುನಾವಣೆ ಬಳಿಕ ಬಿಎಸ್‍ವೈ ರಾಜೀನಾಮೆ ನೀಡಿ ಮನೆಗೆ ಹೋಗ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು.

ಫಲಿತಾಂಶದಿಂದ ಈಗ ಸೋಲು ಅವರನ್ನೇ ಸುತ್ತಿಕೊಂಡಿದ್ದು, ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.ನಾವು 15 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಲ್ಲಿದ್ದವು. 12 ಸ್ಥಾನಗಳನ್ನು ಗೆಲ್ಲುವ ಖಚಿತತೆ ಇತ್ತು. ಅದರಂತೆ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ತಿಳಿಸಿದರು.

ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ ಕ್ರಮ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

Facebook Comments