ಸಂಜಯ್‍ರಾವತ್‍ಗೆ ಡಿಸಿಎಂ ಅಶ್ವತ್ಥ ನಾರಾಯಣ್ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.19- ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿಯೇ ಅಂತಿಮ ವಾಗಿದ್ದು, ಅನಗತ್ಯವಾಗಿ ನೆರೆ ರಾಜ್ಯದ ವರು ಕ್ಯಾತೆ ತೆಗೆಯಬಾರದು ಎಂದು ಸಿಎಂ ಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕ ವಿಚಾರದಲ್ಲಿ ಈಗಾಗಲೇ ಮಹಾಜನ್ ವರದಿ ಬಂದಿದೆ.

ಪದೇ ಪದೇ ರಾಜಕೀಯ ಪ್ರೇರಿತವಾಗಿ ಪ್ರಚೋದಿಸುವ ಕೆಲಸ ಮಾಡಬಾರದು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಅವರ ಹೇಳಿಕೆಗೆ ತಿರುಗೇಟು ಕೊಟ್ಟರು. ನಾವೆಲ್ಲ ಭಾರತೀಯರು. ಈಗಾಗಲೇ ಇತ್ಯರ್ಥವಾಗಿರುವ ವಿಚಾರವನ್ನು ಕೈಗೆತ್ತಿಕೊಂಡು ಭಾವನಾತ್ಮಕವಾಗಿ ಕೆರಳಿಸಿ ವಿವಾದ ಮಾಡಬಾರದು. ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಪ್ರಚೋದಿಸುವ ಕೆಲಸ ಬಿಡಬೇಕು ಎಂದು ಸೂಚ್ಯವಾಗಿ ಹೇಳಿದರು.

ರಾವತ್ ಅವರು ಸಾಕಷ್ಟು ತಿಳುವಳಿಕೆ ಇರುವ ವ್ಯಕ್ತಿ. ಹೀಗೆಲ್ಲ ಮಾತನಾಡಬಾರದು ಎಂದರು. ಸಂಪುಟ ವಿಸ್ತರಣೆ: ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಜತೆ ಮಾತನಾಡಿz್ದÁರೆ. ಸಿಎಂ ದಾವೂಸ್‍ನಿಂದ ಮರಳಿದ ಕೂಡಲೇ ತ್ವರಿತವಾಗಿ ಸಂಪುಟ ವಿಸ್ತರಣೆ ಮಾಡಲಿz್ದÁರೆ ಎಂದು ಇದೇ ವೇಳೆ ಅಶ್ವತ್ಥ ನಾರಾಯಣ್ ತಿಳಿಸಿದರು.

ಸಿಎಂ ದೆಹಲಿಗೆ ತೆರಳಿ ಹೊಸ ಅದ್ಯಕ್ಷರಾದ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಿz್ದÁರೆ ಎಂದು ಹೇಳಿದರು. ಹಾಲಿ ಇಬ್ಬರು ಡಿಸಿಎಂಗಳನ್ನು ಕೈಬಿಟ್ಟು ಹೊಸ ಡಿಸಿಎಂಗಳ ನೇಮಕ ಮಾಡುವ ವಿಚಾರ ಇದೆಯಂತಲ್ಲ ಎಂಬ ವರದಿಗಾರರ ಪ್ರಶ್ನೆಗೆ ನಮ್ಮ ಪಕ್ಷದ ವರಿಷ್ಠರು, ಸಿಎಂ ಯಡಿಯೂರಪ್ಪನವರು ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಿz್ದÁರೆ ಎಂದು ಸ್ಪಷ್ಟಪಡಿಸಿದರು. ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ಏನು ತೀರ್ಮಾನ ಮಾಡಬೇಕೊ ಅದನ್ನು ಮಾಡುತ್ತಾರೆ ಎಂದರು.

Facebook Comments