“ಕೊರೋನಾ ತಡೆಗೆ ಸಾಕಷ್ಟು ಸಿದ್ದತೆ ಮಾಡಿಕೊಂಡಿದ್ದೇವೆ, ಆತಂಕ ಬೇಡ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.22- ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅವಶ್ಯಕತೆ ಇಲ್ಲ. ಕೊರೊನಾ ವೈರಾಣು ಹರಡುವುದನ್ನು ತಡೆಯಲು ಸಾಕಷ್ಟು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಕೊರೊನಾ ವೈರಸ್ ನಮ್ಮ ಜೊತೆಗೆ ಇರುವು ದರಿಂದ ಯಾರೂ ಭಯಭೀತರಾಗುವುದು ಬೇಡ. ಆರ್ಥಿಕ ಚಟುವಟಿಕೆಗಳಿಗೆ ಲಾಕ್‍ಡೌನ್ ಇರುವುದಿಲ್ಲ ಎಂದು ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

ಹೊರರಾಜ್ಯದಿಂದ ಬಂದವರಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಕೊರೊನವನ್ನು ಎದುರಿಸಲು ನಾವು ಸಿದ್ದರಾಗಿದ್ದೇವೆ. ಕೊರೊನಾ ಸೋಂಕಿತರಲ್ಲಿ ಶೇ.5ರಿಂದ 7ರಷ್ಟು ಮಾತ್ರ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಬೇಕಾಗುತ್ತದೆ. ಉಳಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.

ಕನಕಪುರದಲ್ಲಿ ಸ್ವಯಂಪ್ರೇರಿತರಾಗಿ ಜನರೇ ಲಾಕ್‍ಡೌನ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಲಾಕ್‍ಡೌನ್ ಹೇರಲು ಬರುವುದಿಲ್ಲ. ಸಲಹೆ ಕೊಡಬಹುದು ಅಷ್ಟೇ. ಕನಕಪುರದಲ್ಲಿ ಲಾಕ್‍ಡೌನ್ ಆದೇಶ ಜಾರಿಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

Facebook Comments