ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಶನ್‌ ವತಿಯಿಂದ ಮಲ್ಲೇಶ್ವರ ಕ್ಷೇತ್ರದಲ್ಲಿ ಉಚಿತ ಲಸಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.10- ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಶನ್‌ ವತಿಯಿಂದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಶ್ರೀರಾಮಪುರ, ಸುಬ್ರಹ್ಮಣ್ಯಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್‌ ಲಸಿಕೀಕರಣ ಶಿಬಿರಗಳಲ್ಲಿ ಗುರುವಾರ 1,000 ಮಂದಿಗೆ ಉಚಿತ ಲಸಿಕೆ ನೀಡಲಾಯಿತು.

ಸುಬ್ರಹ್ಮಣ್ಯಪುರದ ಬಾಲಾಜಿ ಸಮುದಾಯ ಭವನ, ಶ್ರೀರಾಮಪುರದ ಬಿಬಿಎಂಪಿ ಶಾಲೆಯಲ್ಲಿ ನಡೆದ ಲಸಿಕೆ ಅಭಿಯಾನದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಜನರಿಗೆ ಉಚಿತ ಲಸಿಕೆ ನೀಡಲಾಯಿತು. ಎರಡೂ ಕಡೆ ತಲಾ 500ರಂತೆ 1,000  ಲಸಿಕೆಯನ್ನು ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಶನ್‌ ವತಿಯಿಂದಲೇ ಖರೀದಿ ಮಾಡಿ ನೀಡಲಾಯಿತು.

ಕ್ಷೇತ್ರದ ಶಾಸಕರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎರಡೂ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಸಿಕೆ ಪಡೆಯಲು ಸಾಲಿನಲ್ಲಿ ನಿಂತಿದ್ದ ವಿದ್ಯಾರ್ಥಿಗಳು, ಸಾರ್ವಜನಿಕರ ಯೋಗ- ಕ್ಷೇಮವನ್ನು ಅವರು ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಈ ಕೆಲಸಕ್ಕೆ ಲಸಿಕೆ ಪಡೆಯುವ ಮೂಲಕ ಜನರು ಸಹಕಾರ ನೀಡಬೇಕು. ಕೋವಿಡ್‌ ವಿರುದ್ಧದ ಹೋರಾಟಕ್ಕೆ ಲಸಿಕೆಯೊಂದೇ ಪರಿಹಾರ ಎಂದರು.

ಈಗಾಗಲೇ ಕ್ಷೇತ್ರದ ಹಲವಾರು ಕಡೆ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಫೌಂಡೇಶನ್‌ ವತಿಯಿಂದ ಉಚಿತವಾಗಿ ಲಸಿಕೆ ನೀಡಲಾಗಿದೆ ಈವರೆಗೆ ಸಾವಿರ ವಿದ್ಯಾರ್ಥಿಗಳು ಸೇರಿದಂತೆ 6,000 ಜನರಿಗೆ ಲಸಿಕೆ ನೀಡಲಾಗಿದೆ. ನಮ್ಮ ಕ್ಲಿನಿಕ್‌ ನ ಡಾ.ಸೂರಜ್‌ ಮುಂತಾದವರು ಈ ಲಸಿಕೆ ಅಭಿಯಾನಕ್ಕೆ ಸಾಥ್‌ ನೀಡಿದ್ದಾರೆ.

Facebook Comments