4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ..! ಇಲ್ಲಿದೆ ಡೀಟೇಲ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ಹೈದರಾಬಾದ್/ಭುವನೇಶ್ವರ್/ಇಟಾನಗರ್/ಗ್ಯಾಂಗ್ಟಕ್, ಮೇ 23-ಲೋಕಸಭೆಯೊಂದಿಗೆ ನಾಲ್ಕು ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ.

ಆಂಧ್ರಪ್ರದೇಶದಲ್ಲಿ ಜಗನ್‍ಮೋಹನ್ ರೆಡ್ಡಿ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ(ಟಿಡಿಪಿ) ಧೂಳೀಪಟವಾಗಿದೆ. ಒಡಿಶಾದಲ್ಲಿ ನಿರೀಕ್ಷೆಯಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಾರಥ್ಯದ ಬಿಜು ಜನತಾದಳ(ಬಿಜೆಡಿ) ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ವಿಜಯಲಕ್ಷಿ ಒಲಿಸಿದ್ದಾರೆ. [ LOKSABHA ELECTIONS 2019 RESULT – Live Updates]

ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಉದಯವಾಗಿದ್ದರೆ, ಸಿಕ್ಕಿಂನಲ್ಲಿ ಪಕ್ಷೇತರ ಪ್ರಾಬಲ್ಯ ಹೆಚ್ಚಾಗಿದ್ದು, ಹೊಸ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

# ನಾಯ್ಡುಗೆ ಭಾರೀ ಮುಖಭಂಗ : ಕೆಲ ಚುನಾವಣೋತ್ತರ ಸಮೀಕ್ಷೆಯಂತೆ ಆಂಧ್ರಪ್ರದೇಶದಲ್ಲಿ ವೈಎಸ್‍ಆರ್‍ಸಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. 175 ಸದಸ್ಯ ಬಲದ ಆಂಧ್ರ ವಿಧಾನಸಭೆಯಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿ ಸರ್ಕಾರ ರಚನೆಗೆ ಸಜ್ಜಾಗಿದೆ. ರೆಡ್ಡಿ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

ಆಂಧ್ರದಲ್ಲಿ ನಾಯ್ಡು ಮತ್ತು ಅವರ ಪಕ್ಷದ ವಿರುದ್ಧ ಎದ್ದ ವಿರೋಧಿ ಅಲೆಯಲ್ಲಿ ಟಿಡಿಪಿ ಕೊಚ್ಚಿಕೊಂಡು ಹೋಗಿದೆ. ಆಡಳಿತಾರೂಢ ಟಿಡಿಪಿ ಕೇವಲ 30 ಸ್ಥಾನಗಳನ್ನು ಗಳಿಸಲು ಹೆಣಗಾಡುವಂತಾಯಿತು.

ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯಲು ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಿ ತೃತ್ರೀಯ ರಂಗ ರಚಿಸಲು ತೀವ್ರ ಕಸರತ್ತು ನಡೆಸಿದ್ದ ಚಂದ್ರಬಾಬು ನಾಯ್ಡು ಅವರಿಗೆ ಈ ಫಲಿತಾಂಶದಿಂದ ಭಾರೀ ಮುಖಭಂಗವಾಗಿದೆ.

ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿರುವ ಆಂಧ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೋಡಿ ಮಾಡಲು ಸಾಧ್ಯವಾಗಲಿಲ್ಲ. ಖ್ಯಾತ ಚಿತ್ರನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಸಾರಥ್ಯದ ಜನಸೇನಾ ಪಾರ್ಟಿ(ಜೆಎನ್‍ಪಿ) ಖಾತೆ ತೆರೆಯಲು ವಿಫಲವಾಯಿತು. [ LOKSABHA ELECTIONS 2019 RESULT – Live Updates]

147 ಸದಸ್ಯ ಬಲದ ಒಡಿಶಾದಲ್ಲಿ ನವೀನ್ ಪಟ್ನಾಯಕ್ ಮುಖಂಡತ್ವದ ಬಿಜು ಜನತಾ ದಳ (ಬಿಜೆಡಿ) ಭರ್ಜರಿ ಜಯ ದಾಖಲಿಸಿದೆ. ಬಿಜೆಡಿಗೆ ಬಿಜೆಪಿ ಸಾಥ್ ನೀಡಿದ್ದು, ಈ ಮೈತ್ರಿ ಒಡಿಶಾದಲ್ಲಿ ಮ್ಯಾಜಿಕ್ ಮಾಡಿದೆ. ಶತಾಯಗತಾಯ ಅಧಿಕಾರ ಹಿಡಿಬೇಕೆಂಬ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಭೀಕರ ಫೋನಿ ಚಂಡಮಾರುತದಿಂದ ಚೇತರಿಸಿಕೊಳ್ಳುತ್ತಿರುವ ಓಡಿಶಾಗೆ ನವೀನ್ ಪಟ್ನಾಯಕ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ.

# ಅರುಣಾಚಲದಲ್ಲಿ ಅರಳಿದ ಕಮಲ  :  60 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಈಶಾನ್ಯ ರಾಜ್ಯ ಅರುಣಾಚಲದಲ್ಲಿ ಪ್ರಾಬಲ್ಯ ಸಾಧಿಸಿದೆ. ಈ ರಾಜ್ಯದಲ್ಲಿ ಅಧಿಕಾರ ಗದ್ದುಗೆಗೇರಲು ತೀವ್ರ ಕಸರತ್ತು ನಡೆಸಿದ್ದ ಕಾಂಗ್ರೆಸ್ ಯತ್ನ ಕೈಗೂಡಿಲ್ಲ. [ LOKSABHA ELECTIONS 2019 RESULT – Live Updates]

# ಸಿಕ್ಕಿಂನಲ್ಲಿ ಪಕ್ಷೇತರ ಪ್ರಾಬಲ್ಯ : ಮತ್ತೊಂದು ಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಭಂಗವಾಗಿದೆ. ಅಲ್ಲಿ ಎಸ್‍ಡಿಎಫ್ ಸರ್ಕಾರ ರಚಿಸಲು ಪ್ರಾದೇಶಿಕ ಪಕ್ಷಗಳ ಬೆಂಬಲ ಅನಿವಾರ್ಯವಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin