ಅಧಿವೇಶನ ಮೊಟಕುಗೊಳಿಸಲು ಸರ್ಕಾರ ಚಿಂತನೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.8- ರಾಜ್ಯದಲ್ಲಿ ಕೊರೋನ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ವಿಧಾನ ಮಂಡಲ ಅವೇಶನ ಮೊಟಕುಗೊಳಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿದೆ.ನಿನ್ನೆಯಿಂದ ಆರಂಭವಾಗಿರುವ ಚಳಿಗಾಲದ ಅವೇಶನಕ್ಕೆ ಕಲಾಪದ ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿಯಾಗಿದ್ದವು. ಹಲವು ಸಚಿವರು, ಶಾಸಕರು ಅವೇಶನದ ಮೊದಲ ದಿನವೇ ಕಲಾಪಕ್ಕೆ ಗೈರು ಹಾಜರಾಗಿದ್ದರೆ, ಆಡಳಿತ ಹಾಗೂ ವಿಪಕ್ಷಗಳ ಅನೇಕ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು.

ಇದೇ 15ರವರೆಗೆ ವಿಧಾನಮಂಡಲ ಅವೇಶನ ನಡೆಯಬೇಕಿದೆ. ಆದರೆ, ರಾಜ್ಯದಲ್ಲಿ ಕೊರೋನಾ ಭೀತಿ ಆವರಿಸಿದ್ದು, ನಿಗದಿತ ಅವಗಿಂತ ಮೊದಲೇ ಅವೇಶನ ಮೊಟಕುಗೊಳಿಸಲು ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಭೋಜನ ವಿರಾಮದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಸದನ ಕಲಾಪ ಸಲಹಾ ಸಮಿತಿಯ ಸಭೆ ಕರೆದು, ಮುಖ್ಯಮಂತ್ರಿ, ಕಾನೂನು ಸಚಿವರ ಉಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಚಳಿಗಾಲದ ಅವೇಶನವನ್ನು ಮೊಟಕುಗೊಳಿಸಲು ಶಾಸಕರು ಒತ್ತಡ ಹಾಕುತ್ತಿದ್ದಾರೆ. ಗ್ರಾಮಪಂಚಾಯತ್ ಚುನಾವಣೆ ಇರುವುದರಿಂದ ಅವೇಶನದ ಬಗ್ಗೆ ಶಾಸಕರು ನಿರಾಸಕ್ತಿ ಹೊಂದಿದ್ದಾರೆ. ಅವಗೂ ಮುನ್ನವೇ ಅವೇಶನ ಮೊಟಕು ಮಾಡಿ ಎಂದು ಶಾಸಕರು ಮನವಿ ಮಾಡುತ್ತಿದ್ದಾರೆ.

ಚುನಾವಣೆ ನಡೆಸಬೇಕಾಗಿರುವುದರಿಂದ ಅವೇಶನಕ್ಕೆ ಹಾಜರಾತಿ ಕಷ್ಟ ಎಂದು ಶಾಸಕರು ಹೇಳುತ್ತಿದ್ದಾರೆ. ಹೀಗಾಗಿ ಸದನ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ ಎಂದು ಶಾಸಕರು ಒತ್ತಾಯ ಮಾಡಿದ್ದಾರೆ. ಶುಕ್ರವಾರವೇ ಸದನವನ್ನು ಮೊಟಕುಗೊಳಿಸಲು ಎಲ್ಲಾ ಪಕ್ಷಗಳ ನಾಯಕರು ಚಿಂತನೆ ನಡೆಸಿದ್ದಾರೆ.

ಸ್ಪೀಕರ್ ನೇತೃತ್ವದಲ್ಲಿ ಸದನ ಸಲಹಾ ಸಮಿತಿ ಸೇರಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಡಿ.14 ಹಾಗೂ 15ರಂದು ಒಂದು ದೇಶ-ಒಂದು ಚುನಾವಣೆ ವಿಷಯ ಕುರಿತು ವಿಶೇಷ ಚರ್ಚೆ ನಡೆಸುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದರು. ಆದರೆ, ಇದೇ ತಿಂಗಳ ಅಂತ್ಯಕ್ಕೆ ರಾಜ್ಯಾದ್ಯಂತ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ, ಶಾಸಕರು ಅವೇಶನವನ್ನು ಡಿ.11ರಂದೇ ಮುಕ್ತಾಯಗೊಳಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರ ಬೇಡಿಕೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ, ಸಹಮತ ವ್ಯಕ್ತಪಡಿಸಿದ್ದು, ಚುನಾವಣೆಯ ಸಿದ್ಧತೆ, ಪ್ರಚಾರಗಳಿಗೆ ಕಾಲಾವಕಾಶ ಕಡಿಮೆಯಾಗುತ್ತದೆ. ಆದುದರಿಂದ, ಅವೇಶನವನ್ನು ಐದು ದಿನಕ್ಕೆ ಮೊಟಕುಗೊಳಿಸಿ, ಒಂದು ದೇಶ-ಒಂದು ಚುನಾವಣೆ ಕುರಿತು ಮುಂದಿನ ಸಾಲಿನ ಜನವರಿಯಲ್ಲಿ ನಡೆಯುವ ಅವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿದರೆ ಉತ್ತಮ ಎಂಬ ಸಲಹೆಯು ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ನೀಡಿದ್ದಾರೆ ಎನ್ನಲಾಗಿದೆ.

ಇದರ ನಡುವೆ ಕೊರೊನಾ ಮಹಾಮಾರಿ ಎಲ್ಲರಲ್ಲೂ ಇನ್ನಷ್ಟು ಭೀತಿ ಹುಟ್ಟಿಸಿದೆ.ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಒಂದೆಡೆ ಜನ ಸೇರುವ ಸಭೆ, ಸಮಾರಂಭ, ಮದುವೆ ಕಾರ್ಯಕ್ರಮಗಳು, ಜಾತ್ರೆಗಳನ್ನು ಮುಂದೂಡಲಾಗಿದೆ. ಅದೇ ರೀತಿ ವಿಧಾನಸೌಧದಲ್ಲಿ ಜನಪ್ರತಿನಿಗಳು, ಅಕಾರಿಗಳು ಮತ್ತು ಸಿಬ್ಬಂದಿ ಹಾಗೂ ಜನ ಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆಯಿಂದ ಸೋಂಕು ಹರಡುವ ಭೀತಿ ಆವರಿಸಿದೆ.

ಹೀಗಾಗಿ ಅವೇಶನವನ್ನು ಅವಗಿಂತ ಮೊದಲೇ ಮೊಟಕುಗೊಳಿಸುವ ಸಾಧ್ಯತೆಗಳಿವೆ. ಕೆಲವು ಮಸೂದೆಗಳಿಗೆ ಅನುಮೋದನೆ ಪಡೆದು ಉಭಯ ಸದನವನ್ನು ಅನಿದಿಷ್ರ್ಟಾವಗೆ ಮುಂದೂಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಕೊರೋನ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭಾ ಅವೇಶನ ಕಲಾಪ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೂ ನಿರ್ಬಂಧ ವಿಸಲಾಗಿದೆ.

Facebook Comments

Sri Raghav

Admin