ಸೆ.21ರಿಂದ ಅಧಿವೇಶನ : ಪೂರ್ವಸಿದ್ದತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.24- ಮುಂದಿನ ತಿಂಗಳು 21ರಿಂದ ಹತ್ತು ದಿನಗಳ ಕಾಲ ನಡೆಯುವ 15ನೇ ವಿಧಾನಸಭೆ ಕಾರ್ಯಕಲಾಪ ಕುರಿತಂತೆ ಪೂರ್ವಸಿದ್ದತೆ ಬಗ್ಗೆ ಇಂದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಪರಿಶೀಲನೆ ನಡೆಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ವಿಧಾನಸಭೆಯ ಅಕಾರಿಗಳು ಕಲಾಪದ ಸಭಾಂಗಣವನ್ನು ವೀಕ್ಷಣೆ ಮಾಡಿದರು.

ಹತ್ತು ದಿನಗಳ ಕಾಲ 15ನೇ ವಿಧಾನಸಭಾ ಅವೇಶನ ನಡೆಯಲಿದ್ದು, ಈಗಾಗಲೇ ಕಳೆದ ಸಚಿವ ಸಂಪುಟ ಸಭೆಯಲ್ಲಿ ಸೆ.21ರಿಂದ 30ರವರೆಗೆ ಕಲಾಪ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಅವೇಶನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಪ್ರತಿಯೊಬ್ಬರಿಗೂ ಸ್ಯಾನಿಟೈಸರ್, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ಯಾನಿಂಗ್ ಸೇರಿದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಒಬ್ಬರಿಂದ ಒಬ್ಬರಿಗೆ ಸೋಂಕು ಹರಡುವುದನ್ನು ತಡೆಗಟ್ಟಲು ಈಗಾಗಲೇ ವಿಧಾನಮಂಡಲದ ಸಿಬ್ಬಂದಿ ಅಗತ್ಯ ಸಿದ್ದತೆಗಳನ್ನು ಕೈಗೊಂಡಿದೆ. ಕಳೆದ ಜೂನ್ ತಿಂಗಳಿನಲ್ಲೇ ಅವೇಶನ ನಡೆಯಬೇಕಾಗಿತ್ತು.

ಆದರೆ ರಾಜ್ಯದಲ್ಲಿ ಈ ವೇಳೆ ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣ ನಿಗದಿತ ಅವಯಲ್ಲಿ ಕಲಾಪವನ್ನು ನಡೆಸಲು ಸಾಧ್ಯವಾಗದೆ ಅನಿವಾರ್ಯವಾಗಿ ಮುಂದೂಡಲಾಗಿತ್ತು.

ಕಲಾಪವನ್ನು ವಿಧಾನಸೌಧದ ಬದಲಿಗೆ ಜಿಕೆವಿಕೆ ವಿವಿ, ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಆದರೆ ವಿಧಾನಸಭೆ ಹೊರತುಪಡಿಸಿ ಬೇರೊಂದು ಸ್ಥಳದಲ್ಲಿ ಕಲಾಪ ನಡೆಸಿದರೆ ಭಾರೀ ಪ್ರಮಾಣದ ಖರ್ಚುವೆಚ್ಚ ಹೊರೆಯಾಗಲಿದೆ ಎಂಬ ಕಾರಣಕ್ಕಾಗಿ ವಿಧಾನಸೌಧದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

Facebook Comments

Sri Raghav

Admin