ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆಗೆ ಶಾಸಕರ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.17- ರೈತರಿಗೆ ಹಗಲಿನ ವೇಳೆ ನಿರಂತರವಾಗಿ 7ಗಂಟೆ ವಿದ್ಯುತ್ ಪೂರೈಕೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದರು. ವಿಧಾನಸಭೆಯಲ್ಲಿ ಶರಣ ಬಸವಪ್ಪ ದರ್ಶನಪುರ ಅವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತರ ನೀಡಿ, ರೈತರ ನೀರಾವರಿ ಪಂಪಸೆಟ್‍ಗಳಿಗೆ ತಾಂತ್ರಿಕ ಅಡಚಣೆ ಹೊರತುಪಡಿಸಿ ಹಗಲು 4 ಗಂಟೆ, ರಾತ್ರಿ 3 ಗಂಟೆ ಒಟ್ಟು 7 ಗಂಟೆಗಳ ಕಾಲ ಮೂರು ಪೇಸ್ ವಿದ್ಯುತ್ ಪೂರೈಸಲಾಗುತ್ತಿದೆ.

ತಾಂತ್ರಿಕ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಹಗಲಿನಲ್ಲಿ ನ ಇರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್‍ನ್ನು ಪಂಪ್‍ಸೆಟ್‍ಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಶರಣಬಸಪ್ಪ ದರ್ಶನಪುರ ಮತ್ತು ಶಿವಾನಂದ ಪಾಟೀಲ್ ಅವರು, ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಸುತ್ತಿಲ್ಲ.

ಅಧಿಕಾರಿಗಳು ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಹಗಲು 7 ಗಂಟೆ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಪದೇ ಪದೇ ಜಂಪ್ ಬಿದ್ದು ಹೋಗಿ ಕರೆಂಟ್ ಹೋಗುತ್ತಿರುತ್ತದೆ. ಹಾಗಾಗಿ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ ಎಂದರು.

ರೈತರಿಗೆ 7 ಗಂಟೆಗಳ ಕಾಲ ಅಡಚಣೆ ರಹಿತವಾಗಿ ವಿದ್ಯುತ್ ಪೂರೈಸಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸಿದರು. ಕೃಷಿಗೆ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಸಬೇಕು. ಕೈಗಾರಿಕೆಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ತಾಂತ್ರಿಕ ಅಡಚಣೆ ಹೊರತುಪಡಿಸಿ ನಿರಂತರ ವಿದ್ಯುತ್ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Facebook Comments