ಪಂಜಾಬ್ ಕಳ್ಳಭಟ್ಟಿ ದುರಂತದಲ್ಲಿ ಸತ್ತವರ ಸಂಖ್ಯೆ 90ಕ್ಕೇರಿಕೆ..! 13 ಅಧಿಕಾರಿಗಳು ಸಸ್ಪೆಂಡ್

ಈ ಸುದ್ದಿಯನ್ನು ಶೇರ್ ಮಾಡಿ

ಅಮೃತ್‍ಸರ, ಆ.2- ಪಂಬಾಬ್‍ನ ಮೂರು ಜಿಲ್ಲೆಗಳಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತಗಳಲ್ಲಿ ಸತ್ತವರ ಸಂಖ್ಯೆ 90ಕ್ಕೇರಿದೆ. ಇನ್ನು ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ 27 ಜನರನ್ನು ಬಂಧಿಸಲಾಗಿದೆ. ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ರಾಜ್ಯ ಅಬಕಾರಿ ಇಲಾಖೆಯ ಏಳು ಅಧಿಕಾರಿಗಳು ಮತ್ತು ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಅಮೃತಸರ, ತರ್ನ್ ತರಣ್ ಮತ್ತು ಬಟಾಲಾ ಜಿಲ್ಲೆಗಳಲ್ಲಿ ವಿಷಪೂರಿತ ಮದ್ಯ ಸೇವನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ. ಈ ಕಳ್ಳಭಟ್ಟಿ ದಂಧೆ ಹಿಂದೆ ವ್ಯವಸ್ಥಿತ ಜಾಲದ ಕೈವಾಡವಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಈ ದುರ್ಘಟನೆ ಬಗ್ಗೆ ಪಂಬಾಜ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಈಗಾಗಲೇ ವಿಭಾಗೀಯ ಆಯುಕ್ತರಿಂದ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.

ಈ ಮೂರು ಜಿಲ್ಲೆಗಳಲ್ಲಿ ಕಳ್ಳಭಟ್ಟಿ ಸೇವನೆಯಿಂದ ಸಾವು-ನೋವು ವರದಿಯಾಗುತ್ತಲೇ ಇದ್ದು, ಮತ್ತಷ್ಟು ಮಂದಿ ಅಸುನೀಗುವ ಆತಂಕವಿದೆ. ವಿಷಪೂರಿತ ಮದ್ಯ ಸೇವಿಸಿದ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದುರ್ಘಟನೆ ನಡೆದ ನಂತರ ಈ ಮೂರು ಜಿಲ್ಲೆಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಬಕಾರಿ ಮತ್ತು ಪೆಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಕಳ್ಳಭಟ್ಟಿ ಖದೀಮ ಬಲ್ವಿಂದರ್ ಸಿಂಗ್ ಸೇರಿದಂತೆ ಈವರೆಗೆ 27 ಜನರನ್ನು ಬಂಧಿಸಿ ಭಾರೀ ಪ್ರಮಾಣದ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.

ಈ ಮಧ್ಯೆ, ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯದ ಆರೋಪದ ಮೇಲೆ ಅಬಕಾರಿ ಇಲಾಖೆಯ ಏಳು ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಆರು ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.

ಈ ದುರಂತದ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿರುವ ಅವರು ವಿಭಾಗೀಯ ಆಯುಕ್ತರಿಂದ ಈ ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ.

Facebook Comments

Sri Raghav

Admin