ಎಟಿಎಂ ಹಣ ಕಳವಿಗೆ ಯತ್ನ : ವ್ಯಕ್ತಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.9- ಎಟಿಎಂ ಮಿಷನ್‍ಗಳನ್ನು ಡ್ಯಾಮೇಜ್ ಮಾಡಿ ಹಣ ಕಳವು ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ರಿಜ್ವಾನ್(28) ಬಂಧಿತ ಆರೋಪಿ. ಈತನಿಂದ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ಲಕ್ಷ ರೂ. ಬೆಲೆ ಬಾಳುವ 12 ವಿವಿಧ ಕಂಪನಿಯ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಏ.6ರಂದು ಬೆಳಗಿನ ಜಾವ 2.30ರ ಸುಮಾರಿನಲ್ಲಿ ಬಸವೇಶ್ವರನಗರ 15ನೇ ಮುಖ್ಯರಸ್ತೆ, ಐಸಿಸಿಐ ಬ್ಯಾಂಕ್‍ನ ಎಟಿಎಂನಲ್ಲಿ ವ್ಯಕ್ತಿಯೊಬ್ಬ ಎಟಿಎಂ ಮಿಷನ್‍ಗಳನ್ನು ಡ್ಯಾಮೇಜ್ ಮಾಡಿ ಹಣ ಕಳವು ಮಾಡಲು ಯತ್ನಿಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಇನ್‍ಸ್ಪೆಕ್ಟರ್ ಯರ್ರಿಸ್ವಾಮಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ.

ಎಟಿಎಂ ಹಾಗೂ ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಅಳವಡಿಸಿದ್ದ ಬ್ಯಾಟರಿಗಳನ್ನು ಕಳವು ಮಾಡಿದ್ದಾಗಿ ಆರೋಪಿ ತಿಳಿಸಿದ ಮೇರೆಗೆ ಒಂದು ಲಕ್ಷ ರೂ. ಬೆಲೆ ಬಾಳುವ 12 ವಿವಿಧ ಕಂಪನಿಯ ಬ್ಯಾಟರಿಗಳನ್ನು ವಶಪಡಿಸಿಕೊಳ್ಳುವಲ್ಲಿ ಬಸವೇಶ್ವರನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

Facebook Comments