ಬೆಂಗಳೂರಲ್ಲಿ ಹಾಡಹಗಲೇ ಆಟೋ ಚಾಲಕನ ಕಗ್ಗೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.26- ಹಾಡಹಗಲೇ ಆಟೋ ಒಳಗೆ ಚಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸುತ್ತಮುತ್ತಲ ನಾಗರಿಕರನ್ನು ಬೆಚ್ಚಿಬೀಳಿಸಿದೆ. ಶಾಂಪುರ ನಿವಾಸಿ ವಿನೋದ ಅಲಿಯಾಸ್ ಗುಂಡ (30) ಕೊಲೆಯಾಗಿರುವ ಆಟೋ ಚಾಲಕ.

ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ವಿನೋದ ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಶಾಂಪುರ ರೈಲ್ವೆ ಗೇಟ್ ಸಮೀಪ ಆಟೋ ನಿಲ್ಲಿಸಿಕೊಂಡು ಆಟೋದಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಈತನ ಮೇಲೆ ದಾಳಿ ಮಾಡಿ ಚಾಕುವಿನಿಂದ ಎದೆಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾರ್ವಜನಿಕರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ದುಷ್ಕರ್ಮಿಗಳು ಆಟೋ ಚಾಲಕನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತಕ್ಷಣ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿದಾಗ ಆಟೋ ಒಳಗೆ ಚಾಲಕನನ್ನು ಕೊಲೆ ಮಾಡಿರುವುದು ಕಂಡುಬಂದಿದೆ. ಮೃತ ದೇಹವನ್ನು ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಯಾರು, ಯಾವ ಕಾರಣಕ್ಕಾಗಿ ಆಟೋ ಚಾಲಕನನ್ನು ಕೊಲೆ ಮಾಡಿದ್ದಾರೆಂಬ ಬಗ್ಗೆ
ಪ್ರಕರಣ ದಾಖಲಿಸಿಕೊಂಡಿರುವ ಡಿಜೆ ಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Facebook Comments