ನ.26ರಂದು ಆಟೋ-ಟ್ಯಾಕ್ಸಿ ಚಾಲಕರ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.23- ಕೋವಿಡ್ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ವಾಹನಗಳ ಸಾಲ ಮನ್ನಾ ಮಾಡಬೇಕು. ಚಾಲಕರ ಪುನಶ್ಚೇತನಕ್ಕೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆಯಡಿ ಸಾಲ ನೀಡುವುದು, ಖಾಸಗಿ ಲೇವಾದೇವಿದಾರರಿಂದಾಗುವ ಕಿರುಕುಳ ತಪ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ (ಜೆಸಿಟಿಯು) ನ.26ರಂದು ನಗರದಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದೆ.

ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ನಡೆಸಿದ ಜೆಸಿಟಿಯು ಸಂಚಾಲಕ ಬಿ.ವಿ.ರಾಘವೇಂದ್ರ ಅವರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯುತ್ತಿದ್ದು, ಅಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು, ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಚಾಲಕರ ವಾಹನಗಳನ್ನು ಅನಕೃತವಾಗಿ ಖಾಸಗಿ ಲೇವಾದೇವಿದಾರರು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ದುಬಾರಿ ಬಡ್ಡಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಕಂತುಗಳ ಮೇಲಿನ ಹೆಚ್ಚುವರಿ ಬಡ್ಡಿ ತೆಗೆದುಕೊಳ್ಳುವುದನ್ನು ನಿಲ್ಲಿಸಿ ಬಡ್ಡಿ ಮನ್ನಾ ಮಾಡುವ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು. ಲಾಕ್‍ಡೌನ್ ಸಂಕಷ್ಟದಲ್ಲಿರುವ ಚಾಲಕರಿಗೆ ಪ್ರತಿ ತಿಂಗಳು ಏಳೂವರೆ ಸಾವಿರ ರೂ.ನಂತೆ ಮಾರ್ಚ್‍ವರೆಗೆ ಪರಿಹಾರ ನೀಡಬೇಕು.

ಈ ಹಿಂದೆ ಘೋಷಿಸಿದಂತೆ 5 ಸಾವಿರ ರೂ. ಪರಿಹಾರ ನೀಡದೆ ಇರುವವರಿಗೆ ಕೂಡಲೇ ಪರಿಹಾರ ಧನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಅಸಂಘಟಿತ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಿ ಎಲ್ಲ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತಾ ಕಾಯ್ದೆ ಜಾರಿಗೊಳಿಸಬೇಕು. ಆಟೋ ಮತ್ತು ಟ್ಯಾಕ್ಸಿ ಚಾಲಕರ ಕಲ್ಯಾಣ ಮಂಡಳಿ ರಚಿಸಿ ಪಿಎಫ್, ಇಎಸ್‍ಐ, ಶಿಕ್ಷಣ, ಪಿಂಚಣಿ, ವಸತಿ ಮುಂತಾದ ಸೌಲಭ್ಯಗಳನ್ನು ನೀಡಬೇಕು.

ಹೊಸ ಆಟೋರಿಕ್ಷಾ ಮಾರಾಟ ತೆರಿಗೆಯನ್ನು ಶೇ.17 ರಿಂದ ಶೇ.5ಕ್ಕೆ ಇಳಿಸಬೇಕು. ಓಲಾ ಮತ್ತು ಊಬರ್ ಸಂಸ್ಥೆ ಮಾದರಿಯಲ್ಲಿ ಸರ್ಕಾರವೇ ಆ್ಯಪ್ ಆಧಾರಿತ ಸಂಸ್ಥೆಯನ್ನು ಸ್ಥಾಪಿಸಬೇಕು. ಮೋಟಾರು ವಾಹನ ಕಾಯ್ದೆ ತಿದ್ದುಪಡಿ ರದ್ದು ಮಾಡುವುದು, ರೈತ ವಿರೋ, ಕಾನೂನು ಮತ್ತು ಕಾರ್ಮಿಕ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ ಅವರು ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕನ್ನಡ ಒಕ್ಕೂಟ ಡಿ.5ರಂದು ಕರೆಕೊಟ್ಟಿರುವ ರಾಜ್ಯ ಬಂದ್‍ಗೆ ಬೆಂಬಲ ನೀಡುವುದಾಗಿ ತಿಳಿಸಿದರು. ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಲಯನ್ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ.ಸಿ.ಸಂಪತ್, ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಮೀನಾಕ್ಷಿ ಸುಂದರಂ, ಸಿ.ಎನ್.ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಆಟೋ ಮತ್ತು ಟ್ಯಾಕ್ಸಿ ಘಟಕ, ಜಯಕರ್ನಾಟಕ ಆಟೋ ಚಾಲಕರ ಘಟಕ ಸೇರಿದಂತೆ ವಿವಿಧ ಸಂಘಟನೆಗಳ ಪದಾಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments