ಆಯೋಧ್ಯೆ ವಿಚಾರಣೆ ನೇರ ಪ್ರಸಾರಕ್ಕೆ ಮನವಿ ಸಿಜೆಐ ಅಂಗಳಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.6 (ಪಿಟಿಐ)- ಆಯೋಧ್ಯೆಯ ಭೂವಿವಾದ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಅಥವಾ ವಿಡಿಯೋ ಚಿತ್ರೀಕರಣ ಮಾಡಬೇಕೆಂದು ಕೋರಿ ಸಲ್ಲಿಸಿಲಾಗಿರುವ ಅರ್ಜಿಗಳ ವಿಚಾರಣೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ನಿರ್ಧಾರ ಕೈಗೊಳ್ಳಲಿದ್ಧಾರೆ ಎಂದು ಸುಪೀಂಕೋರ್ಟ್ ಇಂದು ತಿಳಿಸಿದೆ. ಉತ್ತರ ಪ್ರದೇಶದ ಆಯೋಧ್ಯೆಯ ರಾಮಜನ್ಮ ಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಗೊಗೊಯಿ ನೇತೃತ್ವದ ಪಂಚ ನ್ಯಾಯಾಧೀಶರ ಸಂವಿಧಾನ ಪೀಠ ನಡೆಸುತ್ತಿದೆ.

ಆಯೋಧ್ಯೆ ಭೂ ವಿವಾದದ ವಿಚಾರಣೆಯ ಕಲಾಪಗಳನ್ನು ನೇರ ಪ್ರಸಾರ ಮಾಡಬೇಕು ಅಥವಾ ವಿಡಿಯೋ ಚಿತ್ರೀಕರಣ ನಡೆಸಬೇಕೆಂದು ಕೋರಿ ಆರ್‍ಎಸ್‍ಎಸ್ ಮಾಜಿ ಮುಖಂಡ ಕೆ.ಎನ್.ಗೋವಿಂದಾಚಾರ್ಯ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್ ಮತ್ತು ಸೂರ್ಯಕಾಂತ್ ಅವರನ್ನು ಒಳಗೊಂಡ ಪೀಠವು, ಈ ಮನವಿಯ ವಿಚಾರಣೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ಅವರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.

Facebook Comments