ಬಿಗ್ ಬ್ರೇಕಿಂಗ್ : ನಾಳೆಯೇ ಅಯೋಧ್ಯೆ ತೀರ್ಪು, ದೇಶದಾದ್ಯಂತ ಭಾರಿ ಬಿಗಿಭದ್ರತೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ : ದಶಕಗಳಿಂದ ದೇಶದ ಜನ ಭಾರಿ ನಿರೀಕ್ಷೆಯಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದೆ ಬಿಟ್ಟಿದೆ, ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದದ ತೀರ್ಪು ನಾಳೆ ಹೊರ ಬೀಳಲಿದೆ eಟಿಜu ರಾಷ್ಟ್ರೀಯ ಸುದ್ದಿಮಾಧ್ಯಮಗಳು ವರದಿ ಮಾಡಿವೆ.

ಅಯೋಧ್ಯೆ ಪ್ರಕರಣದ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಈಗಾಗಲೇ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿತ್ತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ನವೆಂಬರ್ 17ರಂದು ನಿವೃತ್ತಿಯಾಗಲಿದ್ದು, ಅಷ್ಟರೊಳಗಾಗಿ ತೀರ್ಪು ಹೊರಬೀಳಲಿದೆ ಎಂದು ಹೇಳಲಾಗಿತ್ತು.

ಇದೀಗ ತೀರ್ಪು ಪ್ರಕಟಣೆಗೆ ದಿನಾಂಕ ನಿಗದಿಯಾಗಿದ್ದು ನಾಳೆ ಬೆಳಗ್ಗೆ 10-30 ಕ್ಕೆ ಅಯೋಧ್ಯೆ ವಿವಾದದ ತೀರ್ಪು ಹೊರಬೀಳಲಿದೆ ಎಂದು ಹೇಳಲಾಗಿದೆ.

ಈ ನಡುವೆ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸಿಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರಕಾರ ಸಂದೇಶವನ್ನು ರವಾನಿಸಿದೆ. ಅಲ್ಲದೇ ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ .

ಅಯೋಧ್ಯಾ ಪ್ರಕರಣದ ತೀರ್ಪು ಹೊರಬೀಳುವ ಸಮಯದಲ್ಲಿ, ದೇಶದಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಅನ್ನೋ ಕಾರಣಕ್ಕಾಗಿ ಗೃಹ ಇಲಾಖೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಭದ್ರತಾ ವ್ಯವಸ್ಥೆಗಳ ಭಾಗವಾಗಿ ಎರಡು ಹೆಲಿಕಾಪ್ಟರ್‍ಗಳನ್ನು ಸಜ್ಜಾಗಿರಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಅಯೋಧ್ಯೆ ತೀರ್ಪಿನಿಂದಾಗಿ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಖ್ಯಮಂತ್ರಿ ನಿನ್ನೆ ತಡರಾತ್ರಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ದಂಡಾಧಿಕಾರಿಗಳೂ ಸೇರಿದಂತೆ ಕೆಲವು ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫೆರೆನ್ಸ್ ನಡೆಸಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಳಸಲು ಎರಡು ಹೆಲಿಕಾಪ್ಟರ್‍ಗಳನ್ನು ಸಜ್ಜಾಗಿಡುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಅವರ ಸೂಚನೆಯಂತೆ ಅಗತ್ಯವಾದ ಎಲ್ಲ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ ಅವರು, ಪ್ರತಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಾಮರ್ಶಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ. ಲಕ್ನೋದಲ್ಲಿ ಒಂದು ಮುಖ್ಯ ನಿಯಂತ್ರಣ ಕೊಠಡಿಯನ್ನು ಮತ್ತು ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಕಂಟ್ರೋಲ್ ರೂಮ್‍ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇದೇ ತಿಂಗಳ ನವೆಂಬರ್ 17ರ ಒಳಗೆ ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಹೊರಬೀಳಲಿದೆ.

# ಸಿಜೆಐ-ಸಿಎಸ್ ಮಹತ್ವದ ಚರ್ಚೆ :
ಈ ಮಧ್ಯೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತೀ ರಂಜನ್ ಗೊಗೊಯಿ ಅವರು ದೆಹಲಿಯಲ್ಲಿ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಸಭೆ ನಡೆಸಿದರು. ತೀರ್ಪಿನಿಂದ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಉಂಟಾಗಬಹುದಾದ ಮತ್ತು ಅದನ್ನು ನಿಭಾಯಿಸಬೇಕಾದ ಕ್ರಮಗಳ ಕುರಿತು ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ತಿವಾರಿ ಮತ್ತು ಡಿಜಿಪಿ ಓಂ ಪ್ರಕಾಶ್ ಸಿಂಗ್ ಅವರೊಂದಿಗೆ ತಮ್ಮ ಕೊಠಡಿಯಲ್ಲಿ ಚರ್ಚಿಸಿದರು.

# ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಮೋದಿ ತಾಕೀತು :
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ರಾಮಮಂದಿರ- ಬಾಬರಿ ಮಸೀದಿ ವಿವಾದದ ಅಂತಿಮ ತೀರ್ಪಿಗೆ ದಿನಗಣನೆ ಆರಂಭವಾಗಿರುವಾಗಲೇ ಆತಂಕದ ಪರಿಸ್ಥಿತಿ ಸೃಷ್ಟಿಯಾಗಿದೆ.

ಈ ನಡುವೆ ಅನಗತ್ಯ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.ದೇಶದಲ್ಲಿ ಸೌಹಾರ್ದತೆ ಹಾಗೂ ಸಾಮರಸ್ಯದ ವಾತಾವರಣ ಕಾಪಾಡುವ ಅಗತ್ಯವಿದ್ದು, ಅಯೋಧ್ಯೆ ವಿವಾದ ಸಂಬಂಧ ಅನಗತ್ಯ ಹೇಳಿಕೆಗಳನ್ನು ನೀಡದಿರಿ ಎಂದು ಕೇಂದ್ರ ಸಚಿವರಿಗೆ ಮೋದಿಯವರು ಸೂಚಿಸಿದ್ದಾರೆ.

Facebook Comments

Sri Raghav

Admin