ಅಯೋಧ್ಯೆ ವಿವಾದ : ಸಂಧಾನ ಸಮಿತಿ ಮಧ್ಯಸ್ಥಿಕೆ ತೃಪ್ತಿಕರವಾಗದಿದ್ದಲ್ಲಿ ತಾನೇ ವಿಚಾರಣೆ : ಸುಪ್ರೀಂ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.11-ಅಯೋಧ್ಯೆ ವಿವಾದವನ್ನು ಸೌಹಾರ್ದ ಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ರಚಿಸಲಾಗಿರುವ ತ್ರಿಸದಸ್ಯ ಮಧ್ಯಸ್ಥಿಕೆ ಪೀಠದ ಸಂಧಾನ ಪ್ರಕ್ರಿಯೆ ತೃಪ್ತಿಕರವಾಗಿಲ್ಲದಿದ್ದರೆ, ದಿನನಿತ್ಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ.

ಅಯೋಧ್ಯೆಯ ರಾಮಜನ್ಮಭೂಮಿ ಬಾಬ್ರಿ ಮಸೀದಿ ಭೂವಿವಾದವನ್ನು ಶೀಘ್ರ ಇತ್ಯರ್ಥಗೊಳಿಸುವಂತೆ ಕೋರಿ ತಕರಾರುದಾರರಲ್ಲಿ ಒಬ್ಬರು ನಿನ್ನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇನ್ನೊಂದು ವಾರದೊಳಗೆ ಸಂಧಾನ ಸಮಿತಿಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಸೂಚಿಸಿದೆ.

ಸೌಹಾರ್ದಯುತವಾಗಿ ವಿವಾದ ಇತ್ಯರ್ಥಕ್ಕಾಗಿ ನೇಮಿಸಲ್ಪಟ್ಟ ಸಮಿತಿಯಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ನಿನ್ನೆ ಅರ್ಜಿ ದಾರರು ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದರು.

ಮುಖ್ಯ ನ್ಯಾಯಮೂರ್ತಿ ರಂಜನ್‍ಗೊಗೈ ನೇತೃತ್ವದ ಪಂಚ ನ್ಯಾಯಾಧೀಶರ ಪೀಠ ಇಂದು ಈ ಪ್ರಕರಣದ ವಿಚಾರಣೆ ನಡೆಸಿ ಸಂಧಾನ ಪೀಠದ ಮಧ್ಯಸ್ಥಿಕೆ ತೃಪ್ತಿಕರವಾಗದಿದ್ದಲ್ಲಿ ತಾನೇ ಈ ಪ್ರಕರಣದ ವಿಚಾರಣೆಯನ್ನು ದಿನನಿತ್ಯ ತೆಗೆದುಕೊಳ್ಳುವುದಾಗಿ ತಿಳಿಸಿತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ