ಎಚ್ಚರಿಕೆ : ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪೊಲೀಸರ 10 ಸೂಚನೆಗಳು

ಈ ಸುದ್ದಿಯನ್ನು ಶೇರ್ ಮಾಡಿ

1.ರಾಮ ಜನ್ಮಭೂಮಿ ಮತ್ತು ಬಾಬ್ರೀ ಮಸೀದಿ ವಿವಾದದ ಕುರಿತು ಮಾನ್ಯ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಪೇಸ್ ಬುಕ್, ಇನ್ಸ್ಟೋಗ್ರಾಮ್, ವಾಟ್ಸ್ ಅಪ್ , ಟ್ವಿಟ್ಟರ್ ಹಾಗೂ ಇನ್ನಿತರೇ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು / ಪೋಸ್ಟ್ ಗಳನ್ನು, ಕಮೆಂಟ್ ಗಳನ್ನು ಹಾಕಬೇಡಿ.

2.ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನಿಂದ ನಿಯಮಗಳು ಅನ್ವಯವಾಗಲಿದ್ದು, ಪೇಸ್ ಬುಕ್, ಇನ್ಸ್ಟೋಗ್ರಾಮ್, ವಾಟ್ಸ್ ಅಪ್, ಟ್ವಿಟ್ಟರ್ ಹಾಗೂ ಇನ್ನಿತರೇ ಜಾಲತಾಣಗಳ ಮೇಲೆ ಸೂಕ್ತ ನಿಗಾವಹಿಸಲಾಗುವುದು.

3. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ತಪ್ಪು ಸಂದೇಶಗಳನ್ನು ಯಾರಿಗೂ ರವಾನಿಸಬೇಡಿ, ಈ ಬಗ್ಗೆ ಮಕ್ಕಳು, ಸಹೋದರ, ಸಹೋದರಿಯರು, ಅಕ್ಕಪಕ್ಕದವರು ಹಾಗೂ ಸಂಬಂಧಿಕರಿಗೆ ಈ ಮಾಹಿತಿಯನ್ನು ತಿಳಿಸಿ.

4. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಪೋಸ್ಟ್ / ವೀಡಿಯೋ ಸಂದೇಶಗಳನ್ನು ಪೋಸ್ಟ್ ಮಾಡಬೇಡಿ.

5.ಯಾವುದೇ ರಾಜಕೀಯ ಹಾಗೂ ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶಗಳನ್ನು ಕಳುಹಿಸುವುದು, ರವಾನಿಸುವುದು ಅಪರಾಧವಾಗಿದ್ದು ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

6.ರಾಮ ಜನ್ಮಭೂಮಿ ಮತ್ತು ಬಾಬ್ರೀ ಮಸೀದಿ ವಿಚಾರವು ದೇಶದ ಅತೀ ಗಂಭೀರ ವಿಚಾರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಸದಸ್ಯರುಗಳು ಗಂಭೀರವಾಗಿ ಯೋಚಿಸಿ, ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ದಕ್ಕೆಯನ್ನುಂಟು ಮಾಡುವಂತಹ ಸಂದೇಶಗಳನ್ನು ಹಾಕುವುದು ಅಥವಾ Forward ಮಾಡಬಾರದಾಗಿ ಸೂಚಿಸಿದೆ.

7. ಯಾರಿಂದಲೋ ಬಂದಂತಹ ಪ್ರಚೋದನಾತ್ಮಕ ಸಂದೇಶಗಳನ್ನು ಬೇರೆ ಗ್ರೂಪ್ ಗಳಿಗೆ ಮರು ಕಳುಹಿಸುವುದು (Forward) ಕಂಡುಬಂದಲ್ಲಿ, ಸಂದೇಶವನ್ನು ಕಳುಹಿಸಿದ ವ್ಯಕ್ತಿಯ ವಿರುದ್ಧ ಮತ್ತು ಗ್ರೂಪ್ ಅಡ್ಮಿನ್ ರವರುಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಳ್ಳಲಾಗುವುದು.

8. ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ವಾಟ್ಸ್ ಅಪ್ ಗಳಲ್ಲಿ ಸದರಿ ವಿಚಾರಕ್ಕೆ ಸಂಬಂಧಿಸಿದ ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಯಾವುದೇ ಸಂದೇಶಗಳನ್ನು ಕಳುಹಿಸದಂತೆ ಕಟ್ಟೆಚ್ಚರ ವಹಿಸುವುದು.

9. ವಿಚಾರವು ದೇಶದ ಸಾರ್ವಭೌಮತ್ವ ಹಾಗೂ ಸೌಹಾರ್ದತೆಗೆ ನೇರವಾಗಿ ಪರಿಣಾಮ ಬೀರುವಂತಹ ವಿಚಾರವಾದ್ದರಿಂದ ಯಾವುದೇ ತಪ್ಪು ವಿಚಾರಗಳನ್ನು ರವಾನಿಸಬೇಡಿ.

10. ತಪ್ಪದೇ ಈ ವಿಚಾರವನ್ನು ಎಲ್ಲರಿಗೂ ತಿಳಿಸಿ ವಿಷಯದ ಬಗ್ಗೆ ಗಮನಹರಿಸಿ ನಿಯಮಗಳ ಹಾಗೂ ಗುಂಪುಗಳ ಸದಾ ಜಾಗರೂಕರಾಗಿ ಇರಿ. ಮಾದರಿ ಸಮಾಜಕ್ಕೆ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ.
– ಉಪ ಪೊಲೀಸ್ ಆಯುಕ್ತರು, ಈಶಾನ್ಯ ವಿಭಾಗ

Facebook Comments

Sri Raghav

Admin