“ಆಯುಷ್ ಇಲಾಖೆಯ ಸಿಬ್ಬಂದಿಗೆ ಅಲೋಪತಿ ವೈದ್ಯರ ಸರಿ ಸಮಾನ ವೇತನ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 26- ಆಲೋಪತಿ ವೈದ್ಯರಿಗೆ ಸರಿ ಸಮನಾಗಿ ವೇತನ ಹೆಚ್ಚಿಸಲು ರಾಜ್ಯ ಸರ್ಕಸರ ಸ್ಪಂದಿಸಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲು ಮುಂದಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಆಯುಷ್ ಇಲಾಖೆಯ ಸಂಘದ ಪದಾಧಿಕಾರಿಗಳ ಜೊತೆ ಸರಿ ಸುಮಾರು ಎರಡು ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಲೋಪತಿ ವೈದ್ಯರಿಗೆ ಸಮನಾಗಿ ವೇತನ ಹೆಚ್ಚಿಸಬೇಕು ಎಂದು ಬೇಡಿಕೆ ಮುಂದಿಟ್ಟುಕೊಂಡು ಆಯುಷ್ ಇಲಾಖೆಯ ಸಿಬ್ಬಂದಿಗಳು, ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದು ನಡೆದ ಚರ್ಚೆಯಲ್ಲಿ ವೇತನ ಹೆಚ್ಚಳಕ್ಕೆ ಸಮ್ಮತಿಸಲಾಗಿದೆ. ಆಲೋಪತಿ ವೈದ್ಯರಿಗಿಂತ ಹೆಚ್ಚಿರುವ ವೇತನ ಟಾಪ್ ಅಪ್ ಪ್ರಸ್ತಾವನೆಯನ್ನು ಶೀರ್ಘವೇ ಆರ್ಥಿಕ ಇಲಾಖೆಗೆ ಕಳುಹಿಸಲಾಗುವುದು.

ಅದೇ ರೀತಿ ಆಯುಷ್ ಶಿಕ್ಷಣದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆಯುತ್ತಿರುವವರ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಲು ಬೇಡಿಕೆ ಮಂಡಿಸಿದ್ದರು ಇದಕ್ಕೂ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಸೇರಿದಂತೆ ಕೇಂದ್ರ ಸರ್ಕಾರ ಪುರಷ್ಕೃತ ಆರೋಗ್ಯ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಬೇರೆ ರಾಜ್ಯಗಳಲ್ಲಿ ವೇತನ ಹೆಚ್ಚಿದೆ. ನಮ್ಮಲ್ಲೂ ವೇತನ ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಎಂಬಿಬಿಎಸ್ ವೈದ್ಯರಂತೆ ಆಯುಷ್ ವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.ಚರ್ಚೆಯ ಬಳಿಕ ಮುಷ್ಕರ ಕೈ ಬಿಟ್ಟು ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಮುಷ್ಕರ ಕೈಬಿಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಯುಷ್ ವೈದ್ಯರ ಸಂಘದ ಅಧ್ಯಕ್ಷ ಡಾ.ಆನಂದ್ ಅವರು, ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಮ್ಮೆಲ್ಲಾ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಸಂಘದ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಿ ಮುಷ್ಕರ ಹಿಂಪಡೆಯುವ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು.

Facebook Comments

Sri Raghav

Admin