ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್‍ಗೂ ಕೊರೊನಾ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಆ.13- ಕೇಂದ್ರ ಆಯುಷ್ (ಆಯುರ್ವೇದ, ಯೋಗ, ಯುನಾನಿ ಮತ್ತು ಸಿದ್ಧ) ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೇಂದ್ರ ಸಚಿವರು ಈಗ ಐಸೋಲೇಷನ್‍ನಲ್ಲಿ ಇದ್ದು, ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಐದನೇ ಸಚಿವರಿಗೆ ಕೋವಿಡ್-19 ತಗುಲಿದಂತಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು ನನಗೆ ಕೊರೊನಾ ಸೋಂಕು ದೃಢಪಟಿದೆ. ನಾನು ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ಧಾರೆ.

ಶ್ರೀಪಾದ್ ಯಸ್ಸೋ ನಾಯಕ್ ಅವರಿಗೂ ಮುನ್ನ ಕೇಂದ್ರ ಸಚಿವರಾದ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಅರ್ಜುನ್ ಮೇಘ್ವಾಲ್ ಮತ್ತು ಕೈಲಾಶ್ ಚೌಧರಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು.

Facebook Comments

Sri Raghav

Admin