ಅಯೋಧ್ಯೆಯಲ್ಲಿ ಬಾಬರಿ ಮಸೀದಿಯಷ್ಟೇ ಗಾತ್ರದ ಮಸೀದಿ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ಸೆ.5- ಸುಪ್ರೀಂಕೋರ್ಟ್ ತೀರ್ಪಿನಂತೆ ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ನೀಡಲಾಗಿರುವ ಐದು ಎಕರೆ ಸಂಕೀರ್ಣದಲ್ಲಿ ಬಾಬರಿ ಮಸೀದಿಯಷ್ಟೇ ಗಾತ್ರದ ಮಸೀದಿ ನಿರ್ಮಾಣವಾಗಲಿದೆ ಎಂದು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಕಾರ್ಯದರ್ಶಿ ಮತ್ತು ವಕ್ತಾರ ಅಥರ್ ಹುಸೇನ್ ತಿಳಿಸಿದ್ದಾರೆ.

ಧನ್ನಿಪುರದಲ್ಲಿ ನೀಡಲಾಗಿರುವ ಸಂಕೀರ್ಣದಲ್ಲಿ ಆಸ್ಪತ್ರೆ, ಇಂಡೋ-ಇಸ್ಲಾಮಿಕ್ ಸಂಶೋಧನಾ ಕೇಂದ್ರದ ವಸ್ತುಸಂಗ್ರಹಾಲಯ ಮುಂತಾದ ಸೌಲಭ್ಯಗಳಿದ್ದು, ಮಸೀದಿ 15,000 ಚದರ ಅಡಿ ವಿಸ್ತೀರ್ಣದಲ್ಲಿ ಇರುತ್ತದೆ ಎಂದು ಅವರು ಹೇಳಿದ್ದಾರೆ.

ಖ್ಯಾತ ಆಹಾರ ವಿಮರ್ಶಕ ಪುಷ್ಪೇಶ್ ಪಂತ್ ಅವರು ವಸ್ತುಸಂಗ್ರಹಾಲಯವನ್ನು ನಿರ್ವಹಿಸಲು ಒಪ್ಪಿಗೆ ನೀಡಿದ್ದು, ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಪ್ರಾಧ್ಯಾಪಕ ಎಸ್.ಎಂ. ಅಖ್ತರ್ ಅವರು ಯೋಜನೆಯ ಸಲಹೆಗಾರರಾಗಿರುತ್ತಾರೆ.

ಐದು ಎಕರೆ ಜಾಗದಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಎಂಬ ಟ್ರಸ್ಟ್‍ನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ವಾಸ್ತುಶಿಲ್ಪ ವಿಭಾಗದ ಮುಖ್ಯಸ್ಥ ಅಖ್ತರ್ ಅವರು, ಇಡೀ ಸಂಕೀರ್ಣವು ಭಾರತದ ನೀತಿ ಮತ್ತು ಇಸ್ಲಾಂ ಧರ್ಮದ ಮನೋಭಾವವನ್ನು ಒಟ್ಟುಗೂಡಿಸುತ್ತದೆ ಈ ಹಿಂದೆ ಹೇಳಿದ್ದರು.  ಸುಪ್ರೀಂಕೋರ್ಟ್‍ನ ನಿರ್ದೇಶನದ ಮೇರೆಗೆ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ಐದು ಎಕರೆ ಜಾಗವನ್ನು ಮಂಜೂರು ಮಾಡಿತು.

ಸುದೀರ್ಘ ಕಾನೂನು ಹೋರಾಟದ ನಂತರ ಸುಪ್ರೀಂ ಕೋರ್ಟ್ ಕಳೆದ ನ.9 ರಂದು ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮ್ ದೇವಾಲಯ ನಿರ್ಮಾಣದ ಪರವಾಗಿ ತೀರ್ಪು ನೀಡಿತ್ತು ಮತ್ತು ಸುನ್ನಿ ವಕ್ಫ್ ಮಂಡಳಿಗೆ ಪರ್ಯಾಯ ಐದು ಎಕರೆ ಜÁಗವನ್ನು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತು.

Facebook Comments